ಈ ಹಂತದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯ, ಎರಡು ದಿನ ಕಾದು ನೋಡಿ: ಸದಾನಂದ ಗೌಡ
ಕೋರ್ಟ್ ನಿಂದ ಬಂದಿರುವ ತೀರ್ಪು ಆಘಾತಕಾರಿಯಾಗಿದೆ. ಈ ಹಂತದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯ ಎಂದು ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಸದಾನಂದ ಗೌಡ, ಕೋರ್ಟ್ ನಿಂದ ಬಂದಿರುವ ತೀರ್ಪು ಆಘಾತಕಾರಿಯಾಗಿದೆ. ಈ ಹಂತದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯ ಎಂದು ಹೇಳಿದ್ದಾರೆ. ಇದೇ ವೇಳೆ ನಿರ್ವಹಣಾ ಮಂಡಳಿ ವಿಚಾರವಾಗಿ ಮಾರ್ಮಿಕವಾಗಿ ನುಡಿದಿರುವ ಸದಾನಂದ ಗೌಡ, ಎರಡು ದಿನ ಕಾಡು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಆರಂಭದಲ್ಲೇ ಎಡವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದು, ರಾಜ್ಯದ ಜಲಾಶಯಗಳ ವಸ್ತುಸ್ಥಿತಿ ಅರಿಯಲು ತಜ್ಞರ ತಂಡ ಕಳಿಸಲು ರಾಜ್ಯ ಸರ್ಕಾರ ಹಲವು ಬಾರಿ ಮನವಿ ಮಾಡಿತ್ತು, ಆದರೆ ಕೋರ್ಟ್ ತೀರ್ಪಿನಿಂದ ರಾಜ್ಯಕ್ಕೆ ಆಘಾತವಾಗಿದೆ. ಈ ಹಂತದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯ ಎಂಬುದನ್ನು ತಾವು ಕಾನೂನು ಸಚಿವರಾದಾಗ ಕೋರ್ಟ್ ಗೆ ಸ್ಪಷ್ಟಪಡಿಸಿರುವುದಾಗಿ ಸದಾನಂದ ಗೌಡ ಮಾಹಿತಿ ನೀಡಿದ್ದಾರೆ.
ಇನ್ನು ಪ್ರಧಾನಿ ಮಧ್ಯಪ್ರವೇಶದ ಬಗ್ಗೆಯೂ ಮಾತನಾಡಿರುವ ಸದಾನಂದ ಗೌಡ, ಸಾಂವಿಧಾನಿಕ ಆದೇಶದ ವಿರುದ್ಧ ಮಧ್ಯಸ್ಥಿಕೆ ವಹಿಸುವುದು ಅಸಾಧ್ಯ ಎಂದಿದ್ದಾರೆ, ಆದರೆ ಎರಡು ದಿನ ಕಾದು ನೋಡಿ ಎಲ್ಲವೂ ತಿಳಿಯಲಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


