ಮಾನನಷ್ಟ ಮೊಕದ್ದಮೆ: ಗೌರಿ ಲಂಕೇಶ್ ಗೆ ಜಾಮೀನು
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಜೆಎಂಎಫ್ ನ್ಯಾಯಾಲಯ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಷರತ್ತುಬದ್ಧ ಜಾಮೀನು..

ಹುಬ್ಬಳ್ಳಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಜೆಎಂಎಫ್ ನ್ಯಾಯಾಲಯ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ.
ಸಂಸದ ಪ್ರಹ್ಲಾದ ಜೋಶಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಎಲ್. ಅಮರ್, 10 ಸಾವಿರ ನಗದು ಠೇವಣಿ, 25 ಸಾವಿರ ಮೊತ್ತದ ಬಾಂಡ್ ಮತ್ತು ಅಕ್ಟೋಬರ್ 5ರಂದು ಮುಂದಿನ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದರು.
ಈ ಪ್ರಕರಣದ ವಿಚಾರಣೆಗೆ ಅವರು ಮೂರು ಬಾರಿ ಗೈರು ಹಾಜರಾಗಿದ್ದರಿಂದ ಜೆಎಂಎಫ್ ನ್ಯಾಯಾಲಯ ಎರಡು ವಾರಗಳ ಹಿಂದೆ ಬಂಧನ ವಾರಂಟ್ ಹೊರಡಿಸಿತ್ತು. ಹೀಗಾಗಿ, ಅವರನ್ನು ಕೇಶ್ವಾಪುರ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಶುಕ್ರವಾರ ಬಂಧಿಸಿ, ಶನಿವಾರ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಿದರು.
ಕೆಲಸದ ಒತ್ತಡದಿಂದ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ ಎಂದರು. ಅಲ್ಲದೇ ಪ್ರಹ್ಲಾದ ಜೋಶಿ ಸಹ ಒಮ್ಮೆಯೂ ನ್ಯಾಯಾಲಯಕ್ಕೆ ಬಂದಿಲ್ಲ ಎಂದು ಆರೋಪಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಎಲ್. ಅಮರ್, 10 ಸಾವಿರ ನಗದು ಠೇವಣಿ, ರು. 25 ಸಾವಿರ ಮೊತ್ತದ ಬಾಂಡ್ ಮತ್ತು ಅಕ್ಟೋಬರ್ 5ರಂದು ಮುಂದಿನ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದರು. ಅಲ್ಲದೆ, ದೂರುದಾರ ಪ್ರಹ್ಲಾದ ಜೋಶಿ ಸಹ ಅಂದು ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


