ಯಾವುದೇ ಕಾರಣಕ್ಕೂ ನಾರಿಮನ್ ಬದಲಾವಣೆ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ತಮ್ಮ ಪ್ರತಿಷ್ಠೆಗಾಗಿ ಸುಪ್ರೀಂಕೋರ್ಟ್ ಎದುರು ರಾಜ್ಯವನ್ನು ಬಲಿಪಶು ಮಾಡಿದ ಕರ್ನಾಟಕ ರಾಜ್ಯ ಪರ ವಕೀಲ ಫಾಲಿ ನಾರಿಮನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ...

ಬೆಂಗಳೂರು: ತಮ್ಮ ಪ್ರತಿಷ್ಠೆಗಾಗಿ ಸುಪ್ರೀಂಕೋರ್ಟ್ ಎದುರು ರಾಜ್ಯವನ್ನು ಬಲಿಪಶು ಮಾಡಿದ ಕರ್ನಾಟಕ ರಾಜ್ಯ ಪರ ವಕೀಲ ಫಾಲಿ ನಾರಿಮನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ.
ಕಾವೇರಿ ವಿವಾದ ಸಂಬಂಧ ರಾಜ್ಯದ ಪರ ವಕೀಲರನ್ನು ಬದಲಿಸುವಂತೆ ಮಾತುಗಳು ಹಾಗೂ ಆಗ್ರಹಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ನಾರಿಮನ್ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯ ಪರ ವಕೀಲ ತಂಡದ ಮುಖ್ಯಸ್ಥ ನಾರಿಮನ್ ಅವರನ್ನು ಬದಲಾವಣೆ ಮಾಡುವುದಿಲ್ಲ. ನಾರಿಮನ್ ಅವರ ಸಾಮರ್ಥ್ಯ ಮತ್ತು ಬದ್ಧತೆಯನ್ನು ಯಾರೊಬ್ಬರೂ ಪ್ರಶ್ನಿಸಲಾಗದು. ರಾಜ್ಯದ ಪರ ವಕೀಲರಾಗಿ 32 ವರ್ಷಗಳ ಕಾಲ ಸುಧೀರ್ಘಾವಾಗಿ ಕೆಲಸ ಮಾಡಿದ್ದಾರೆ.
ಕಾವೇರಿ ವಿವಾದದ ಆಳ ಅಗಲದ ಬಗ್ಗೆ ಅವರಿಗೆ ಸಂಪೂರ್ಣ ಮಾಹಿತಿ ತಿಳಿದಿದೆ. ಹೀಗಾಗಿ ನಾರಿಮನ್ ಅವರ ಬದಲಾವಣೆ ಸಾಧ್ಯವಿಲ್ಲ. ಅ.18ರಂದು ನಡೆಯಲಿರುವ ವಿಚಾರಣೆಯಲ್ಲೂ ನಾರಿಮನ್ ಅವರೇ ರಾಜ್ಯದ ಪರವಾಗಿ ವಾದ ಮಂಡಿಸಲಿದ್ದಾರೆ. ತಂಡಕ್ಕೆ ಹೊಸಬರನ್ನು ಸೇರ್ಪಡೆ ಮಾಡುತ್ತೇವೆಯೇ ವಿನಃ ಯಾವುದೇ ಕಾರಣಕ್ಕೂ ತಂಡದ ಮುಖ್ಯಸ್ಥರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


