ವಿವಿಧ ಇಲಾಖೆಯಲ್ಲಿನ ಗ್ರೂಪ್ ಸಿ ಹುದ್ದೆಗಳಿಗೆ ಕೆಪಿಎಸ್ಸಿಯಿಂದ ಅರ್ಜಿ ಆಹ್ವಾನ
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್ 'ಸಿ' ಗ್ರೂಪ್ ನ 1,353 ಹುದ್ದೆಗಳಿಗೆ ತಾಂತ್ರಿಕೇತರ ಹುದ್ದೆಗಳ ನೇಮಕಕ್ಕೆ ಕರ್ನಾಟಕ ಲೋಕ ಸೇವಾ ಆಯೋಗ ...

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್ 'ಸಿ' ಗ್ರೂಪ್ ನ 1,353 ಹುದ್ದೆಗಳಿಗೆ ತಾಂತ್ರಿಕೇತರ ಹುದ್ದೆಗಳ ನೇಮಕಕ್ಕೆ ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಮುಖ್ಯವಾಗಿ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಿವಿಧ ಶಿಕ್ಷಕರ ಮತ್ತು ನಿಲಯ ಪಾಲಕರ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ. ಉಳಿದಂತೆ ಪೌರಾಡಳಿತ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಸಂಸದೀಯ ಸಚಿವಾಲಯದಲ್ಲಿನ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಒಟ್ಟು ಹುದ್ದೆ: 1353
ಅರ್ಜಿ ಸಲ್ಲಿಕೆ ಪ್ರಾರಂಭ: ಅಕ್ಟೋಬರ್ 7
ಅರ್ಜಿ ಸಲ್ಲಿಸಲು ಕೊನೇ ದಿನ: ನವೆಂಬರ್ 7
ಅರ್ಜಿ ಶುಲ್ಕ: ಸಾಮಾನ್ಯ /ಒಬಿಸಿ– ರು.300, ಎಸ್ಸಿ/ಎಸ್ಟಿ–ರು.25
ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 35
ವಿದ್ಯಾರ್ಹತೆ: ಪದವಿ/ಬಿಇಡಿ/ಪಿಯುಸಿ/ಎಸ್‌ಎಸ್‌ಎಲ್‌ಸಿ(ಹುದ್ದೆಗಳ ಅನುಸಾರ)
ಸಹಾಯವಾಣಿ ಸಂಖ್ಯೆ: 7899617837/ 9901294490
ಜಾಲತಾಣ: kpsc.kar.nic.in
ಪ್ರತಿ ಹುದ್ದೆಗೆ ಬೇರೆ ಬೇರೆಯಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದ್ದು, ಬಹುತೇಕ ಎಲ್ಲ ಹುದ್ದೆಗಳಿಗೆ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


