ಬೆಳ್ಳಂದೂರು ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ
ಬೆಳ್ಳಂದೂರು ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದ್ದು, ರಕ್ಷಣಾ ಕಾರ್ಯಾಚರಣೆ ಶುಕ್ರವಾರವೂ ಮುಂದವರೆದಿದೆ.

ಬೆಂಗಳೂರು: ಬೆಳ್ಳಂದೂರು ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದ್ದು, ರಕ್ಷಣಾ ಕಾರ್ಯಾಚರಣೆ ಶುಕ್ರವಾರವೂ ಮುಂದವರೆದಿದೆ.
ಇಂದು ಬೆಳಗ್ಗೆ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮತ್ತೊಂದು ಶವ ಪತ್ತೆಯಾಗಿದ್ದು, ಅವಶೇಷಗಳನ್ನು ತೆರವು ಗೊಳಿಸುವ ಮೂಲಕ ಶವವನ್ನು ಹೊರತೆಗಿದಿದ್ದಾರೆ. ಆ ಮೂಲಕ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದಂತಾಗಿದೆ.
ಕಟ್ಟಡದಲ್ಲಿ ಮತ್ತೆ ಯಾರಾದರೂ ಸಿಲುಕಿದ್ದಾರೆಯೇ ಎಂಬುದರ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ಅವಶೇಷಗಳನ್ನು ತೆರವುಗೊಳಿಸುವ ಮೂಲಕ ಶೋಧ ನಡೆಸಲಾಗುತ್ತಿದೆ. ಇನ್ನು ಶೋಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಸಲಕರಣೆಯೊಂದನ್ನು ಬಳಕೆ ಮಾಡುತ್ತಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಶೋಧಿಸಲು ಅತ್ಯಾಧುನಿಕ ವಿಕ್ಟಿಮ್ ಡಿಟಕ್ಟರ್ ಸಾಧನ ಬಳಕೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಪ್ರಕರಣ ಸಂಬಂಧ ಈಗಾಗಲೇ ಕಟ್ಟಡದ ಗುತ್ತಿಗೆದಾರನನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


