ರಾತ್ರಿ 1ರವರೆಗೂ ಬಾರ್ ಮತ್ತು ರೆಸ್ಟೋರೆಂಟ್ ಅವಧಿ ವಿಸ್ತರಣೆ: ಅಬಕಾರಿ ಸಚಿವ ಹೆಚ್ ವೈ ಮೇಟಿ
ಮದ್ಯಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು, ಕರ್ನಾಟಕ ಸರ್ಕಾರ ಬಾರ್ ಮತ್ತು ರೆಸ್ಟೋರೆಂಟ್ ಗಳ ಸಮಯವನ್ನು ವಿಸ್ತರಿಸುವ ನಿರ್ಧಾರಕ್ಕೆ ಬಂದಿದೆ.

ಬೆಂಗಳೂರು: ಮದ್ಯಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು, ಕರ್ನಾಟಕ ಸರ್ಕಾರ ಬಾರ್ ಮತ್ತು ರೆಸ್ಟೋರೆಂಟ್ ಗಳ ಸಮಯವನ್ನು ವಿಸ್ತರಿಸುವ ನಿರ್ಧಾರಕ್ಕೆ ಬಂದಿದೆ.
ಈ ಬಗ್ಗೆ ಸ್ವತಃ ಅಬಕಾರಿ ಸಚಿವ ಹೆಚ್ ವೈ ಮೇಟಿ ಅವರು ಸ್ಪಷ್ಟನೆ ನೀಡಿದ್ದು, ಈ ಹಿಂದೆ ವಾರಾಂತ್ಯದಲ್ಲಿ ಮಾತ್ರ ಇದ್ದ ಬಾರ್ ಅವಧಿ ವಿಸ್ತರಣೆಯನ್ನು ಇದೀಗ ವಾರಪೂರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಬಾರ್ ಮತ್ತು ರೆಸ್ಟೋರೆಂಟ್ ಗಳ ಸಮಯವನ್ನು 1 ಗಂಟೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ ಮೇಟಿ ಅವರು, ಅಬಕಾರಿ ಇಲಾಖೆಯ ವತಿಯಿಂದ ಬಾರ್ ಮತ್ತು ರೆಸ್ಟೋರೆಂಟ್ ಸಮಯವನ್ನು ರಾತ್ರಿ 1ಗಂಟೆಯವರೆಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಆದರೆ ಈ ವಿಸ್ತರಣೆ ಕೇವಲ ರಾಜಧಾನಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಸಮಯವೇ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಹಾರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಮದ್ಯಮಾರಾಟ ನಿಷೇಧಿಸುವ ಕುರಿತು ಮಾತಾನಾಡಿದ ಮೇಟಿ ಅವರು, "ಆ ಅಧಿಕಾರ ತಮಗಿಲ್ಲ. ನಾನು ಕೇವಲ ಯಾರೂ ಕುಡಿಯಬೇಡಿ ಎಂದು ಸಲಹೆ ನೀಡಬಹುದು. ಆದರೆ ನೀವು ಕುಡಿಯಲೇ ಬಾರದು ಎಂದು ಕಾನೂನು ಮಾಡುವ ಹಕ್ಕು ತಮಗಿಲ್ಲ. ಈ ಆಧಿಕಾರವಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತ್ರ. ಅವರು ಬಯಸಿದರೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬಹುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


