ಸುಗಂಧ ದ್ರವ್ಯ ತಜ್ಞೆ ಮೋನಿಕಾ ಹತ್ಯೆ: ಬೆಂಗಳೂರಿನಲ್ಲಿ ಆರೋಪಿ ಬಂಧನ
ಸುಗಂಧ ದ್ರವ್ಯ ತಜ್ಞೆ ಮೋನಿಕಾ ಗುರ್ಡೆ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಬಸವನಗುಡಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ...

Published On :
ಬೆಂಗಳೂರು: ಸುಗಂಧ ದ್ರವ್ಯ ತಜ್ಞೆ ಮೋನಿಕಾ ಗುರ್ಡೆ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಬಸವನಗುಡಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಗೋವಾದ ಪಣಜಿಯಿಂದ 10 ಕಿ.ಮೀ ದೂರದಲ್ಲಿರುವ ಸಂಗೋಲ್ಡದಲ್ಲಿ ಅಕ್ಟೋಬರ್ 6ರ ರಾತ್ರಿ ಮೋನಿಕಾಳನ್ನು ಆಕೆಯ ನಿವಾಸದಲ್ಲೇ ಕೊಲೆ ಮಾಡಲಾಗಿತ್ತು. ಮೋನಿಕಾಳ ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು.
ಈ ಸಂಬಂಧ ಗೋವಾದ ಪೊಲೀಸರು ತನಿಖೆ ನಡೆಸುತ್ತಿದ್ದು ಮೋನಿಕಾಳ ಎಟಿಎಂ ಕಾರ್ಡ್ ಅನ್ನು ಬಳಸುತ್ತಿದ್ದ ಆರೋಪಿ ರಾಜಕುಮಾರ್ ಎಂಬಾತ ಗೋವಾದಲ್ಲಿ ಎರಡು ಬಾರಿ ಹಣ ಡ್ರಾ ಮಾಡಿದ್ದು ಬಳಿಕ ಬೆಂಗಳೂರಿನ ಎಟಿಎಂವೊಂದರಲ್ಲಿ ಹಣ ಡ್ರಾ ಮಾಡಿದ್ದರಿಂದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಟನ್ ಪೇಟೆಯೊಂದರ ಲಾರ್ಡ್ಜ್ ವೊಂದರಲ್ಲಿ ವಾಸ್ತವ್ಯವಿದ್ದ ರಾಜಕುಮಾರನನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆರೋಪಿ ರಾಜಕುಮಾರ್ ಮೋನಿಕಾಳ ಮನೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು ಹಣಕ್ಕಾಗಿಯೇ ಮೋನಿಕಾಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bangaloreಬೆಂಗಳೂರುPoliceಪೊಲೀಸ್ಕೊಲೆ ಪ್ರಕರಣಸೆಕ್ಯೂರಿಟಿ ಗಾರ್ಡ್murder caseSecurity GuardMonika Ghurdeಮೋನಿಕಾ ಗುರ್ಡೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


