ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲೇ ಗುಂಡು-ತುಂಡು ಪಾರ್ಟಿ ವಿಡಿಯೋ ವೈರಲ್, ಆಯುಧ ಪೂಜೆ ಎಂದ ಅಧಿಕಾರಿಗಳು
ಹುಬ್ಬಳಿಯ ನವನಗರ ಪೊಲೀಸ್ ಠಾಣೆಯಲ್ಲಿಯೇ ಪೊಲೀಸರು ಗುಂಡು-ತುಂಡಿನ ಪಾರ್ಟಿ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ.

Published On :
ಹುಬ್ಬಳ್ಳಿ: ಹುಬ್ಬಳಿಯ ನವನಗರ ಪೊಲೀಸ್ ಠಾಣೆಯಲ್ಲಿಯೇ ಪೊಲೀಸರು ಗುಂಡು-ತುಂಡಿನ ಪಾರ್ಟಿ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಆದರೆ ಅಲ್ಲಿ ಪಾರ್ಟಿ ನಡದೇ ಇಲ್ಲ. ಅದು ಆಯುಧ ಪೂಜೆ ಎಂದು ಅವಳಿ ನಗರ ಪೊಲೀಸ್ ಆಯುಕ್ತರ ಕಚೇರಿ ಅಧಿಕಾರಿಗಳು ಸಮಜಾಯಿಸಿ ನೀಡುತ್ತಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಎಸ್ ಆರ್ ನಾಯಕ ವರ್ಗಾವಣೆ ರದ್ದಾಗಿದಕ್ಕೆ ನವನಗರ ಪೊಲೀಸ್ ಠಾಣೆಯಲ್ಲಿ ಈ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎನ್ನಲಾಗಿದೆ.
ಪೊಲೀಸ್ ಠಾಣೆಯಲ್ಲೇ ಪೊಲೀಸರು, ರೌಡಿ ಶೀಟರ್‍ಗಳು, ಪಾಲಿಕೆಯ ಸದಸ್ಯರು ಸೇರಿದಂತೆ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದು, ಇದರ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಈ ವರ್ತನೆಗೆ ಸಾರ್ವಜನಿಕರಿಂದ ಖಂಡನೆ ವ್ಯಕ್ತವಾಗಿದೆ.
ಗುಂಡು ತುಂಡಿನ ಪಾರ್ಟಿ ನಡೆದ ಬಗ್ಗೆ ಅವಳಿ ನಗರ ಪೊಲೀಸ್ ಆಯಕ್ತ ಪಾಂಡುರಂಗ ರಾಣೆ ಅವರು ಪ್ರತಿಕ್ರಿಯಿಸಿದ್ದು, ನವನಗರ ಪೊಲೀಸ್ ಠಾಣೆಯಲ್ಲಿ ಪಾರ್ಟಿ ಮಾಡಿರುವುದು ನಿಜ. ಆದರೆ ಅಲ್ಲಿ ಸಾರಾಯಿ ಸೇವನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಆದರೂ ಡಿಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ. ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳುಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


