ಮಠಗಳ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ: ಸ್ವರೂಪಾನಂದ ಸರಸ್ವತಿ ಸ್ವಾಮಿ ಅಸಮಾಧಾನ
ಮಠದ ವಿಚಾರಗಳಲ್ಲಿ ಸರ್ಕಾರ ಮಧ್ಯಸ್ಥಿಕೆವಹಿಸುತ್ತಿರುವುದಕ್ಕೆ ದ್ವಾರಕಾಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಶುಕ್ರವಾರ ಅಸಮಾಧಾನ...

ಬೆಂಗಳೂರು: ಮಠದ ವಿಚಾರಗಳಲ್ಲಿ ಸರ್ಕಾರ ಮಧ್ಯಸ್ಥಿಕೆವಹಿಸುತ್ತಿರುವುದಕ್ಕೆ ದ್ವಾರಕಾಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಧಾರ್ಮಿಕ ಸಂಸ್ಥೆಗಳ ಮೇಲೆ ನಿರ್ಬಂಧಗಳನ್ನು ಹೇರಿವುದು ತಪ್ಪು. ಧರ್ಮ ವಿರೋಧಿ ನೀತಿಗಳನ್ನು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಮಠಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವುದು ಹಾಗೂ ಮಠಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದರಿಂದ ಸರ್ಕಾರ ದೂರವಿರಬೇಕೆಂದು ಹೇಳಿದ್ದಾರೆ.
ಸಮಾವೇಶ ಕಾರ್ಯಕ್ರಮವೊಂದರಲ್ಲಿ ಕೆಲವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮುತ್ತಿಗೆ ಹಾಕುವುದಾಗಿ ಈ ಹಿಂದೆ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು, ಮಠಕ್ಕೆ ಮುತ್ತಿಗೆ ಹಾಕಿದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತೇನೆಂದು ಹೇಳಿದ್ದರು.
ಅಲ್ಲದೆ, ಮಠಕ್ಕೆ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಗೋರಕ್ಷಕರಿಂದ ಆಗುತ್ತಿರುವ ಹಿಂಸಾಚಾರವನ್ನು ವಿರೋಧಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಆ ಸಮಾವೇಶದಲ್ಲಿ ಅನಾವಶ್ಯಕವಾಗಿ ಮಠದ ವಿಚಾರವನ್ನು ಎಳೆಯಲಾಗಿದೆ. ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುತ್ತಿರುವುದಕ್ಕೆ ಈಗಾಗಲೇ ನಮ್ಮ ವಿರೋಧವಿದೆ ಎಂದಿದ್ದರು.
ಮಠಗಳಿಗೆ ಮುತ್ತಿಗೆ ಹಾಕುವ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಧರ್ಮಾಧಿಕಾರಿಗಳು ಇದಕ್ಕೆ ವಿರೋಧಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


