ಬೆಚ್ಚಿ ಬಿದ್ದ ಬೆಂಗಳೂರು: ಶಿವಾಜಿನಗರದಲ್ಲಿ ಹಾಡಹಗಲೇ ವ್ಯಕ್ತಿಯ ಕೊಚ್ಚಿ ಕೊಲೆ!
ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸಗೈದಿದ್ದು, ಹಾಡಹಗಲೇ ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆಗೈದು ಹತ್ಯೆ ಮಾಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸಗೈದಿದ್ದು, ಹಾಡಹಗಲೇ ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆಗೈದು ಹತ್ಯೆ ಮಾಡಿದ್ದಾರೆ.
ಬೆಂಗಳೂರಿನ ಶಿವಾಜಿನಗರಗ ಕಮರ್ಷಿಯಲ್ ಸ್ಟ್ರೀಟ್ ನ ಕಾಮರಾಜ ರಸ್ತೆಯಲ್ಲಿ ರುದ್ರೇಶ್ ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳೀಯರು ತಿಳಿಸಿರುವಂತೆ ಮೃತ ರುದ್ರೇಶ್ ಆರ್ ಎಸ್ ಎಸ್ ಕಾರ್ಯಕರ್ತನಾಗಿದ್ದು, ಇಂದು ಬೆಳಗ್ಗೆ ಪಥಸಂಚಲನ ಮುಗಿಸಿ ವಾಪಸಾಗುತ್ತಿದ್ದರು. ಈ ವೇಳೆ ದಿಢೀರನೇ ನುಗ್ಗಿದ ದುಷ್ಕರ್ಮಿಗಳ ತಂಡ ರುದ್ರೇಶ್ ಮೇಲೆ ಹಲ್ಲೆ ಮಾಡಿ ಕೊಲೆಗೈದಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಮೃತ ರುದ್ರೇಶ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಶಿವಾಜಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


