ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ: ರಾಜ್ಯಪಾಲರಿಗೆ ಬಿಜೆಪಿಯಿಂದ ದೂರು
: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ...

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಬಿಜೆಪಿ ನಿಯೋಗ, ರಾಜ್ಯಪಾಲ ವಜುಭಾಯಿ ವಾಲಾರನ್ನು ಭೇಟಿ ಮಾಡಿ ದೂರು ನೀಡಿತು. ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಹತ್ಯೆ ಘಟನೆಗಳು, ಗಲಭೆಗಳ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಿತು.
ವಿಶೇಷವಾಗಿ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದೂರು ಸಲ್ಲಿಕೆ ಮಾಡಿದರು. ಕೂಡಲೇ ರುದ್ರೇಶ್ ಹಂತಕರ ಬಂಧನಕ್ಕೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಇನ್ನೂ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಶಾಸಕ ಸಿ.ಟಿ ರವಿ ಪತ್ರ ಬರೆದಿದ್ದಾರೆ. ರಾಜ್ಯ ಪೊಲೀಸರು ಭಯದಿಂದಾಗಿ ರುದ್ರೇಶ್ ಹತ್ಯೆಗೆ ಕೌಟುಂಬಿಕ ಕಲಹ ಕರಾಣ ಎಂದು ಹೇಳುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ. ಕೇಂದ್ರ ಗೃಹ ಇಲಾಖೆ ಕೆಲ ಇಸ್ಲಾಮಿಕ್ ಸಂಘಟನೆಗಳನ್ನು ನಿಷೇಧಿಸಿದ್ದರಿಂದ ಕುಪಿತಗೊಂಡವರು ಈ ರೀತಿ ಕೊಲೆಗಳನ್ನು ಮಾಡುತ್ತಿದ್ದಾರೆ ಎಂದು ಸಿ,ಟಿ ರವಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


