ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಮೇಲೆ ಕಿಡಿಗೇಡಿಗಳಿಂದ ಮಸಿ ದಾಳಿ
ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ರಹಸ್ಯವಾಗಿ ವಿವಾಹವಾಗಿದ್ದಾರೆ...

ಬೆಂಗಳೂರು: ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ರಹಸ್ಯವಾಗಿ ವಿವಾಹವಾಗಿದ್ದಾರೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಲಿದ್ದ ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಅವರ ಮುಖಕ್ಕೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪದ್ಮನಾಭ ಪ್ರಸನ್ನ ಅವರು ಯಡಿಯೂರಪ್ಪ ಬೆಂಬಲಿಗರು ನನ್ನ ಮೇಲೆ ಮಸಿ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ಇವರಿಬ್ಬರ ರಹಸ್ಯ ಮದುವೆ ವಿಚಾರ ಬಹಿರಂಗಪಡಿಸಲು ಆಗಮಿಸುತ್ತಿದ್ದಾಗ ನನ್ನ ಮೇಲೆ ಮಸಿ ಬಳಿದಿದ್ದಾರೆ ಎಂದು ಹೇಳಿದರು.
ಬಿಎಸ್ ಯಡಿಯೂರಪ್ಪನವರ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಸಿದ ಪದ್ಮನಾಭ ಅವರು ಯಡಿಯೂರಪ್ಪನವರೇ ನಾಮರ್ದನಂತೆ ವರ್ತಿಸಬೇಡಿ. ಎದುರಿನಿಂದ ಬಂದು ಚೂರಿ ಹಾಕಿ. ಇದು ನಿಮಗೆ ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


