ಪ್ರಕೃತಿ ಹೆಲ್ತ್ ಸಂಸ್ಥೆ ಮಾಲಿಕ ಶಿವಕುಮಾರ್ ಗೆ ಎಂಎಸ್ಎಂಇ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ
ಪ್ರಕೃತಿ ಹೆಲ್ತ್ ಪ್ರಾಡಕ್ಟ್ಸ್ ಸಂಸ್ಥೆಯ ಮಾಲಿಕ ಜೆಡಿ ಶಿವಕುಮಾರ್ ಅವರಿಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮಉದ್ದಿಮೆಗಳ ಸಚಿವಾಲಯದಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ.

ಬೆಂಗಳೂರು: ಪ್ರಕೃತಿ ಹೆಲ್ತ್ ಪ್ರಾಡಕ್ಟ್ಸ್ ಸಂಸ್ಥೆಯ ಮಾಲಿಕ ಜೆಡಿ ಶಿವಕುಮಾರ್ ಅವರಿಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮಉದ್ದಿಮೆಗಳ ಸಚಿವಾಲಯದಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ.
ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಡಿ ಖಾದಿ ಮತ್ತು ಗ್ರಾಮೋದ್ಯೋಗ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆಗಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವಾಲಯದಿಂದ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತದೆ. ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಡಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ 2016 ನೇ ಸಾಲಿನ ಪ್ರಶಸ್ತಿಯನ್ನು ಪ್ರಕೃತಿ ಹೆಲ್ತ್ ಪ್ರಾಡಕ್ಟ್ಸ್ ಸಂಸ್ಥೆಯ ಮಾಲೀಕರಾಗಿರುವ ಜೆಡಿ ಶಿವಕುಮಾರ್ ಅವರಿಗೆ ನೀಡಲಾಗಿದೆ.
ಪ್ರಕೃತಿ ಹೆಲ್ತ್ ಪ್ರಾಡಕ್ಟ್ಸ್ ದೇಶಾದ್ಯಂತ ಜೇನು ತುಪ್ಪ ಸಂಗ್ರಹಣೆ ಸಂಸ್ಕರಣೆ ಮತ್ತು ಪ್ಯಾಕಿಂಗ್ ಸೇರಿದಂತೆ ಹಲವು ದೇಶೀ ಉತ್ಪನ್ನಗಳನ್ನು ಸಂಸ್ಕರಣೆ ಮತ್ತು ಪ್ಯಾಕಿಂಗ್ ಮಾಡುವ ವ್ಯವಸ್ಥೆ ಹೊಂದಿರುವ ಸಂಸ್ಥೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


