ಕಾವೇರಿ ವಿವಾದ: ನಾರಿಮನ್ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ
ಕಾವೇರಿ ನೀರು ಬಿಡುಗಡೆ ಸಂಬಂಧ ನೆರೆ ರಾಜ್ಯ ತಮಿಳು ನಾಡಿನೊಂದಿಗೆ ಸುಪ್ರೀಂ ಕೋರ್ಟ್ ನಲ್ಲಿ ನಡೆಸುತ್ತಿರುವ...

Published On :
ಬೆಂಗಳೂರು: ಕಾವೇರಿ ನೀರು ಬಿಡುಗಡೆ ಸಂಬಂಧ ನೆರೆ ರಾಜ್ಯ ತಮಿಳು ನಾಡಿನೊಂದಿಗೆ ಸುಪ್ರೀಂ ಕೋರ್ಟ್ ನಲ್ಲಿ ನಡೆಸುತ್ತಿರುವ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹಿರಿಯ ವಕೀಲ ಫಾಲಿ.ಎಸ್.ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಇಂದು ದೆಹಲಿಯಲ್ಲಿ ನಾರಿಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ, ಸುಪ್ರೀಂ ಕೋರ್ಟ್ ನಿನ್ನೆ ನೀಡಿದ ಸಲಹೆ ಬಗ್ಗೆ ಚರ್ಚೆ ನಡೆಸಿದರು ಎಂದು ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ನಾರಿಮನ್ ಅವರನ್ನು ಭೇಟಿ ಮಾಡಿ ಹೊರಬಂದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದ ಪರ ವಕೀಲ ನಾರಿಮನ್ ಕೇಸನ್ನು ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.
ತಮಿಳು ನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಿನ್ನೆ , ನೀವೂ ಬದುಕಿ, ಬೇರೆಯವರನ್ನೂ ಬದುಕಲು ಬಿಡಿ, ಕರ್ನಾಟಕದಿಂದ ಎಷ್ಟು ನೀರು ಬಿಡುಗಡೆ ಮಾಡಲು ಸಾಧ್ಯವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿ ಎಂದು ಸಲಹೆ ನೀಡಿತ್ತು.
ತಮಿಳು ನಾಡಿನಲ್ಲಿ 40 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿರುವ ಸಾಂಬಾ ಬೆಳೆಗೆ ಕಾವೇರಿ ನದಿಯಿಂದ 50.52 ಟಿಎಂಸಿ ಅಡಿ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳು ನಾಡು ಸರ್ಕಾರ ಅರ್ಜಿ ಸಲ್ಲಿಸಿತ್ತು.
ಇಂದು ದೆಹಲಿಯಲ್ಲಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಕೂಡ ಕಾನೂನು ತಜ್ಞರು ಮತ್ತು ವಕೀಲರೊಂದಿಗೆ ಚರ್ಚೆ ನಡೆಸಿದರು.
ಸುಪ್ರೀಂ ಕೋರ್ಟ್ ನ ಸಲಹೆಗೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಎಂ.ಬಿ.ಪಾಟೀಲ್, ರಾಜ್ಯದ ಕಾನೂನು ತಂಡ ವಾಸ್ತವ ಪರಿಸ್ಥಿತಿಯನ್ನು ಕೋರ್ಟ್ ಗೆ ಮನವರಿಕೆ ಮಾಡಲಿದ್ದು, ಕರ್ನಾಟಕದ ಜನತೆಗಿರುವ ಕುಡಿಯುವ ನೀರಿನ ಅವಶ್ಯಕತೆ, ಮಳೆ ಅಭಾವ ಮತ್ತು ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಕುರಿತು ತಿಳಿಸಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


