ಕಾವೇರಿ ಹೋರಾಟಕ್ಕೆ ನಟ ದರ್ಶನ್ ಬೆಂಬಲ: ಚಕ್ರವರ್ತಿ ಚಿತ್ರೀಕರಣ ಸ್ಥಗಿತ
ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಕರ್ನಾಟಕದಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗೆ ಚಿತ್ರನಟ ದರ್ಶನ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಕರ್ನಾಟಕದಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗೆ ಚಿತ್ರನಟ ದರ್ಶನ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಮಂಡ್ಯದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ನಟ ದರ್ಶನ್ ತಮ್ಮ ಚಕ್ರವರ್ತಿ ಚಿತ್ರದ ಚಿತ್ರೀಕರಣವನ್ನು ರದ್ದುಗೊಳಿಸಿದ್ದಾರೆ. ಮೂಲಗಳ ಪ್ರಕಾರ ಇಂದು ದರ್ಶನ್ ಮೈಸೂರು ಮತ್ತು ಮಡಿಕೇರಿಯಲ್ಲಿ ನಡೆಯಬೇಕಿದ್ದ ಚಕ್ರವರ್ತಿ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ನಿನ್ನೆ ಮಂಡ್ಯ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಹೋರಾಟಗಾರರಿಗೆ ಬೆಂಬಲ ಸೂಚಿಸಿ ನಟ ದರ್ಶನ್ ತಮ್ಮ ಚಿತ್ರದ ಚಿತ್ರೀಕರಣವನ್ನು ಸ್ಥಗಿತಗೊಳಿಸಿದ್ದಾರೆ.
ನಾಳೆ ಪರಿಸ್ಥಿತಿ ಅವಲೋಕಿಸಿ ಚಿತ್ರದ ಚಿತ್ರೀಕರಣದ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಚಿತ್ರ ತಂಡ ತಿಳಿಸಿದೆ.
ಕರ್ನಾಟಕದಿಂದ ತಮಿಳುನಾಡಿಗೆ ಪ್ರತಿದಿನ 1500 ಕ್ಯೂಸೆಕ್‍ಗಳಂತೆ 10 ದಿನಗಳ ಕಾಲ ನೀರು ಹರಿಸಬೇಕೆಂಬ ಆದೇಶವನ್ನು ವಿರೋಧಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ರೈತರ ಪ್ರತಿಭಟನೆ ತೀವ್ರವಾಗಿದೆ. ಮಂಡ್ಯದಲ್ಲಿ ತಮಿಳುನಾಡು ಸಿಎಂ ಜಯಲಲಿತಾ ಅವರ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಅಣಕು ಶವಯಾತ್ರೆ ಮಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


