ಕಾವೇರಿ ತೀರ್ಪಿಗೆ ವಿರೋಧ: ಬಂದ್ ಹಿನ್ನೆಲೆ ನಗರದಲ್ಲಿ ಹೆಚ್ಚಿದ ಭದ್ರತೆ
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಹಾಗೂ ಜನಪರ ಸಂಘಟನೆಗಳು ನೀಡಿರುವ ಕರ್ನಾಟಕ ರಾಜ್ಯ ಬಂದ್...

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಹಾಗೂ ಜನಪರ ಸಂಘಟನೆಗಳು ನೀಡಿರುವ ಕರ್ನಾಟಕ ರಾಜ್ಯ ಬಂದ್ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
ನಾಳೆ ರಾಜ್ಯದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಿಮಾನ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಲ್ಲಿ ವಿಶೇಷ ಭದ್ರತೆಯನ್ನು ಒದಗಿಸಲಾಗಿದೆ.
ಭದ್ರತೆ ಕುರಿತಂತೆ ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ಎನ್.ಎಸ್ ಮೇಘರಿಕ್ ಅವರು, ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಕೆಎಸ್ಆರ್ ಪಿ ತುಕಡಿಗಳು, ನಗರ ಪೊಲೀಸರು ಸೇರಿದಂತೆ 1000 ಗೃಹ ರಕ್ಷಕ ದಳದ ಸಿಬ್ಬಂದಿಗಳು, 16 ಡಿಸಿಪಿಗಳು, 21 ಎಸಿಪಿ, 105 ಪಿಎಸ್ಐ, 327 ಎಎಸ್ಐ, 929 ಮುಖ್ಯ ಪೇದೆಗಳು ಹಾಗೂ 1976 ಪೇದೆಗಳು ಭದ್ರತೆ ಒದಗಿಸಲಿದ್ದಾರೆ. ಇದಲ್ಲದೆ, , 1 ವಾಟರ್ ಜೆಟ್, 260 ಹೊಯ್ಸಳ ವಾಹನಗಳು ನಿರಂತರವಾಗಿ ನಗರದಲ್ಲಿ ಗಸ್ತು ತಿರುಗಲಿವೆ. ಶಾಂತಿಯುತವಾಗಿ ಬಂದ್ ನಡೆಸಬೇಕಿದ್ದು, ಅಹಿತಕರ ಘಟನೆ ನಡೆಯಬಾರದು ಎಂಬ ಉದ್ದೇಶದಿಂದ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


