"ಬಂದ್"ಳೂರು; ಕರ್ನಾಟಕ ಬಂದ್ ಗೆ ಬಯೋಕಾನ್ ಮುಖ್ಯಸ್ಥೆ ವ್ಯಂಗ್ಯ
ಕಾವೇರಿ ನೀರಿಗಾಗಿ ಕನ್ನಡರ ಪರಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಕುರಿತಂತೆ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ವ್ಯಂಗ್ಯವಾಡಿದ್ದು, ಬಂದ್ ನಿಂದಾಗಿ ಉತ್ಪಾದನಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು: ಕಾವೇರಿ ನೀರಿಗಾಗಿ ಕನ್ನಡರ ಪರಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಕುರಿತಂತೆ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ವ್ಯಂಗ್ಯವಾಡಿದ್ದು, ಬಂದ್ ನಿಂದಾಗಿ ಉತ್ಪಾದನಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಕಿರಣ್ ಮಜುಂದಾರ್ ಅವರು, ಬೆಂಗಳೂರನ್ನು "ಬಂದಳೂರು" ಎಂದು ವ್ಯಂಗ್ಯ ಮಾಡಿದ್ದಾರೆ. "ಮತ್ತೊಂದು ಬಂದ್... ಬೆಂಗಳೂರು ಬಂದಳೂರಾಗಿ ಬದಲಾಗುತ್ತಿದೆ. ಪದೇ ಪದೇ ಬಂದ್ ಮಾಡುವ ಮೂಲಕ ಉತ್ಪಾದನಾ ಕ್ಷೇತ್ರದ ಮೆಲೆ ಗಂಭೀರ ಪರಿಣಾಮ ಬೀರುತ್ತದೆ. ಉಭಯ ರಾಜ್ಯಗಳ ರೈತರೂ ಸಂಕಷ್ಟದಲ್ಲಿದ್ದಾರೆ. ಎಂತಹ ಸಂಕಷ್ಟಸ್ಥಿತಿ.. ಎಂದು ಕಿರಣ್ ವ್ಯಂಗ್ಯವಾಡಿದ್ದಾರೆ.
ಕಿರಣ್ ಮಜುಂದಾರ್ ಅವರ ಈ ಟ್ವೀಟ್ ಸುದ್ದಿಯಾಗುತ್ತಿದ್ದಂತೆಯೇ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದು, ಕಿರಣ್ ಅವರ ನಡೆ ಇದೀಗ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
Another Bandh - it's now Bandhaluru where bandhs r affecting productivity - what a sad situation where farmers on both sides can't share
— Kiran Mazumdar Shaw (@kiranshaw) September 8, 2016
Another Bandh - it's now Bandhaluru where bandhs r affecting productivity - what a sad situation where farmers on both sides can't share
— Kiran Mazumdar Shaw (@kiranshaw) September 8, 2016
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


