ರಾಜ್ಯ

ಕರ್ನಾಟಕ ಬಂದ್ ನ್ನು ಟೀಕಿಸಿದ್ದ ಕಿರಣ್ ಮಜುಂದಾರ್ ಶಾ ವಿರುದ್ಧ ಸೆ.16 ಕ್ಕೆ ಪ್ರತಿಭಟನೆ: ವಾಟಾಳ್ ನಾಗರಾಜ್

ಕರ್ನಾಟಕ ಬಂದ್ ಕುರಿತಂತೆ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ವ್ಯಂಗ್ಯವಾಡಿದ್ದಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಬಂದ್ ನ್ನು ಟೀಕಿಸಿದ್ದ ಕಿರಣ್ ಮಜುಂದಾರ್ ಶಾ ವಿರುದ್ಧ ಸೆ.16 ಕ್ಕೆ ಪ್ರತಿಭಟನೆ: ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಕಾವೇರಿ ನೀರಿಗಾಗಿ ಕನ್ನಡರ ಪರಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಕುರಿತಂತೆ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ವ್ಯಂಗ್ಯವಾಡಿದ್ದಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿರಣ್ ಮಜುಂದಾರ್ ಶಾ ಅವರ ಟ್ವೀಟ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ವಾಟಾಳ್ ನಾಗರಾಜ್, ಕಾವೇರಿಗಾಗಿ ಕರೆ ನೀಡಿರುವ ಕರ್ನಾಟಕ ಬಂದ್ ನ್ನು ಟೀಕಿಸಿರುವ ಕಿರಣ್ ಮಜುಂದಾರ್ ಶಾ ಅವರಿಗೆ ಹುಚ್ಚು ಹಿಡಿದಿದೆ. ಅವರನ್ನು ನಿಮ್ಹಾನ್ಸ್ ಗೆ ಕಳಿಸಬೇಕು ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿರಣ್ ಮಜುಂದಾರ್ ಶಾ ಅವರು ಕರ್ನಾಟಕದಲ್ಲಿ ಕನ್ನಡಿಗರಿಗೆ ಗೌರವ ನೀಡಿ ಇರುವುದಾದರೆ ಇರಲಿ, ಇಲ್ಲವಾದರೆ ತಕ್ಷಣವೇ ಅವರ ಐಟಿಬಿಟಿ ಸಂಸ್ಥೆ ಸಹಿತ ಗಂಟು ಮೂಟೆ ಕಟ್ಟಿ ಅವರ ಊರಿಗೆ ಹೊರಡಲಿ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಇದೆ ವೇಳೆ ಬಂದ್ ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡದ ಐಟಿಬಿಟಿ ಸಂಸ್ಥೆಗಳ ವಿರುದ್ಧವೂ ವಾಟಾಳ್ ನಾಗರಾಜ್ ಕಿಡಿ ಕಾರಿದ್ದು, ಕೆಲವು ಐಟಿಬಿಟಿ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡದೇ, ಕಾರ್ಯನಿರ್ವಹಿಸುತ್ತಿವೆ, ಬಂದ್ ವಿರುದ್ಧ ಮಾತನಾಡಿರುವ ಕಿರಣ್ ಮಜುಂದಾರ್ ಶಾ ಹಾಗು ಬಂದ್ ಗೆ ಬೆಂಬಲ ನೀಡದೇ ಇರುವ ಐಟಿ ಕಂಪನಿಗಳ ವಿರುದ್ಧ ಸೆ.16 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.