ಬೇಜವಾಬ್ದಾರಿ ಹೇಳಿಕೆ ನೀಡುವವರ ಕುರಿತು ಪ್ರತಿಕ್ರಿಯಿಸಲ್ಲ: ರಮ್ಯಾ ವಿರುದ್ಧ ಮಾದೇಗೌಡ ಅಸಮಾಧಾನ
ಕಾವೇರಿ ನೀರಿಗಾಗಿ ಆಗ್ರಹಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಂಸದೆ ರಮ್ಯಾ ಪಾಲ್ಗೊಳ್ಳದ ಕುರಿತಂತೆ ಅಸಮಾಧಾನಗೊಂಡಿರುವ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಅವರು..

ಮಂಡ್ಯ: ಕಾವೇರಿ ನೀರಿಗಾಗಿ ಆಗ್ರಹಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಂಸದೆ ರಮ್ಯಾ ಪಾಲ್ಗೊಳ್ಳದ ಕುರಿತಂತೆ ಅಸಮಾಧಾನಗೊಂಡಿರುವ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಅವರು ಬೇಜವಾಬ್ದಾರಿ ಹೇಳಿಕೆ ನೀಡುವವರ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದು ಹೇಳಿದ್ದಾರೆ.
ತಮ್ಮ ಸ್ವಗೃಹದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಾದೇಗೌಡ ಅವರು, ರಮ್ಯಾ ಈಗಿನ್ನೂ ರಾಜಕೀಯ ನೋಡುತ್ತಿದ್ದಾರೆ. ಅನುಭವವಿಲ್ಲ. ಈ ಹಿಂದೆ ನನ್ನನ್ನು ಭೇಟಿ ಮಾಡಲು ಬಂದಿದ್ದಾಗ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೆ. ಆದರೆ ಅವರು ಹೋರಾಟದಲ್ಲಿ ಪಾಲ್ಗೊಂಡಿಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಬಂದ್ ಹಿನ್ನಲೆಯಲ್ಲಿ ರಮ್ಯಾ ಮಾಡಿದ್ದ ಟ್ವೀಟ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ ಮಾದೇಗೌಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರೇ ಇಲ್ಲ ಎಂದ ಮೇಲೆ ಅದೆಲ್ಲಿಂದ ರೈತರಿಗೆ ನೀರು ಬಿಡುತ್ತಾರೆ ಎಂದು ಪ್ರಶ್ನಿಸಿದರು. ಅಂತೆಯೇ ರಮ್ಯಾ ಟ್ವೀಟ್ ಗೆ ಪ್ರತಿಕ್ರಿಯಿಸಿದ ಅವರು, ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವವರ ಕುರಿತಂತೆ ತಾವು ಪ್ರತಿಕ್ರಿಯಿಸುವುದಿಲ್ಲ. ಸಮಯ ಬಂದಾಗ ಜನರೇ ಅವರಿಗೆ ಸರಿಯಾದ ರೀತಿಯಲ್ಲಿ ಉತ್ತರಿಸುತ್ತಾರೆ. ನಾನೇಕೆ ಈಗ ಪ್ರತಿಕ್ರಿಯಿಸಲಿ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


