"ಕಾವೇರಿ"ದ ಪ್ರತಿಭಟನೆ: ಮಂಡ್ಯದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ
ಕಾವೇರಿ ಬಂದ್ ಬಳಿಕ ಈಗಷ್ಟೇ ಸಹಜ ಸ್ಥಿತಿಯತ್ತ ಮರಳುತ್ತಿರುವ ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಿರುವ ರಜೆಯನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ.

ಮಂಡ್ಯ: ಕಾವೇರಿ ಬಂದ್ ಬಳಿಕ ಈಗಷ್ಟೇ ಸಹಜ ಸ್ಥಿತಿಯತ್ತ ಮರಳುತ್ತಿರುವ ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಿರುವ ರಜೆಯನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ.
ಬಂದ್ ಬಳಿಕ ಮಂಡ್ಯ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದೆಯಾದರೂ, ರೈತರ ಆಕ್ರೋಶ ಯಾವುದೇ ಸಮಯದಲ್ಲಿ ಭುಗಿಲೇಳುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಅವರು ಶಾಲಾ-ಕಾಲೇಜುಗಳಿಗೆ ರಜೆ ಮುಂದುವರೆಸಿದ್ದಾರೆ. ಅಂತೆಯೇ ಮಂಡ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಒದಗಿಸಲಾಗಿರುವ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪ್ರಮುಖವಾಗಿ ಕೃಷ್ಣ ರಾಜ ಸಾಗರದ ಬೃಂದಾವನದ ಬಳಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ.
ಅಂತೆಯೇ ಸೆಪ್ಟೆಂಬರ್ 16ರವರೆಗೂ ಕೃಷ್ಣರಾಜ ಸಾಗರಕ್ಕೆ ಆಗಮಿಸುವ ಪ್ರವಾಸಿಗರಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ.
ನಿನ್ನೆ ಬಂದ್ ವೇಳೆ ಬೃಂದಾವನಕ್ಕೆ ನುಗ್ಗಿದ್ದ ಆಪಾರ ಪ್ರಮಾಣದ ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಈ ವೇಳೆ ಆಕೋರ ಭರಿತ ರೈತರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಪೊಲೀಸರ ಈ ಕ್ರಮ ತೀವ್ರ ಖಂಡನೆಗೆ ಗುರಿಯಾಗಿತ್ತು. ಈ ಸಂಬಂಧ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಮಂಡ್ಯ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು, ರೈತರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ಹೀಗಾಗಿ ಅವರನ್ನು ತಡೆಯಲು ಲಾಠಿಚಾರ್ಜ್ ಮಾಡಲಾಗಿತ್ತು. ಒಂದು ವೇಳೆ ಲಾಠಿ ಚಾರ್ಜ್ ಮಾಡದೇ ಹೋಗಿದ್ದರೆ ಪರಿಸ್ಥಿತಿ ಕೈ ಮೀರುವ ಸಾಧ್ಯತೆ ಇತ್ತು ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


