ತಮಿಳುನಾಡಿಗೆ ನೀರು ಬಿಡುಗಡೆ; ಆದೇಶದಲ್ಲಿ ಮಾರ್ಪಾಡು ಕೋರಿ ರಾಜ್ಯ ಸರ್ಕಾರ 'ಸುಪ್ರೀಂ' ನಲ್ಲಿ ಅರ್ಜಿ ಸಲ್ಲಿಕೆ
ತಮಿಳು ನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾರ್ಪಾಡು ಮಾಡಬೇಕೆಂದು...

Published On :
ಬೆಂಗಳೂರು: ತಮಿಳು ನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾರ್ಪಾಡು ಮಾಡಬೇಕೆಂದು ಕೋರಿ ರಾಜ್ಯ ಸರ್ಕಾರ ಭಾನುವಾರ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಗೆ ಅರ್ಜಿ ಸಲ್ಲಿಸಿದೆ.
ತಮಿಳು ನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸೆಪ್ಟೆಂಬರ್ 5ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಮಾರ್ಪಾಡು ಮಾಡಬೇಕೆಂದು ಕೋರಿ ಕರ್ನಾಟಕ ಸರ್ಕಾರ ಅರ್ಜಿ ಹಾಕಿದೆ. ಕೋರ್ಟ್ ನ ಆದೇಶದಂತೆ ತಮಿಳು ನಾಡಿಗೆ ಈಗಾಗಲೇ 66 ಸಾವಿರ ಕ್ಯೂಸೆಕ್ ನೀರು ಹರಿಸಿದ್ದೇವೆ. ಇನ್ನು ಬಿಡುಗಡೆ ಮಾಡಲು ನಮ್ಮ ಜಲಾಶಯದಲ್ಲಿ ನೀರಿಲ್ಲ. ಹಾಗಾಗಿ ಆದೇಶಕ್ಕೆ ಮಾರ್ಪಾಡು ತರಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಇಂದು ಮಧ್ಯಾಹ್ನ ನಂತರ ಅರ್ಜಿ ಸಲ್ಲಿಕೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅರ್ಜಿ ವಿಚಾರಣೆ ಬಗ್ಗೆ ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Karnataka Governmentಕರ್ನಾಟಕ ಸರ್ಕಾರCauvery waterಕಾವೇರಿ ನೀರುTransform in orderಆದೇಶದಲ್ಲಿ ಮಾರ್ಪಾಡು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


