'ಕಾವೇರಿ'ದ ಪ್ರತಿಭಟನೆ: ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸಿಎಂ ಮನವಿ
ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆಯುತ್ತಿರುವ ಗಲಭೆ, ಹಲ್ಲೆ, ಸಾರ್ವಜನಿಕ...

Published On :
ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆಯುತ್ತಿರುವ ಗಲಭೆ, ಹಲ್ಲೆ, ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಮತ್ತು ಕರ್ನಾಟಕದ ಅಂಗಡಿ-ಹೊಟೇಲ್ ಗಳ ಮೇಲೆ ನಡೆಸಿರುವ ದಾಳಿ ಖಂಡನಾರ್ಹವಾಗಿದೆ. ಇದರಿಂದ ಸಾರ್ವಜನಿಕರ ಜನಜೀವನಕ್ಕೆ ತೊಂದರೆಯುಂಟಾಗುತ್ತಿದ್ದು ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳುವಂತೆ ಎರಡು ರಾಜ್ಯಗಳಲ್ಲಿರುವ ತಮಿಳರು ಮತ್ತು ಕನ್ನಡಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ತಮಿಳು ನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ತಮಿಳು ನಾಡಿನ ಮುಖ್ಯ ಕಾರ್ಯದರ್ಶಿಗಳ ಜತೆ ದೆಹಲಿಯಲ್ಲಿ ಮಾತನಾಡಿದ್ದಾರೆ. ಎರಡು ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರು ಕೂಡ ಮಾತನಾಡಿದ್ದಾರೆ. ತಮಿಳು ನಾಡಿನಲ್ಲಿರುವ ಕನ್ನಡಿಗರ ಹಲ್ಲೆ ದೌರ್ಜನ್ಯ ನಡೆಸುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕನ್ನಡಿಗರಿಕೆ ರಕ್ಷಣೆ ನೀಡಬೇಕೆಂದು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಪತ್ರ ಬರೆಯುತ್ತೇನೆ ಹಾಗೂ ಭದ್ರತೆ ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವರ ಬಳಿ ಮಾತನಾಡುವುದಾಗಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿರುವ ತಮಿಳರಿಗೆ ಸೂಕ್ತಭದ್ರತೆ ನೀಡಲು ಪೊಲೀಸ್ ಮಹಾ ನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್ ಕಮಿಷನರ್ ಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಬೆಂಗಳೂರಿನಲ್ಲಿರುವ ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆ ಎಂದು ಆರೋಪಿಸಿ ಆತನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Tamil NaduSiddaramaiahಸಿದ್ದರಾಮಯ್ಯKarnatakaಕರ್ನಾಟಕಮನವಿappealತಮಿಳು ನಾಡುCauvery water Disputeಕಾವೇರಿ ಜಲ ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


