ಹೊಯ್ಸಳಕ್ಕೆ ಬೆಂಕಿ ಹಚ್ಚಿದ ಉದ್ರಿಕ್ತರ ಮೇಲೆ ಪೊಲೀಸ್ ಫೈರಿಂಗ್; ಒಬ್ಬನ ಸಾವು,ಇಬ್ಬರಿಗೆ ಗಾಯ
ಪ್ರತಿಭಟನೆಯಲ್ಲಿ ತೊಡಗಿದ್ದ ಉದ್ರಿಕ್ತರ ಗುಂಪೊಂದು ಹೊಯ್ಸಳ ವಾಹನಕ್ಕೆ ಬೆಂಕಿ ಹಚ್ಚಿದ್ದರಿಂದ ಉದ್ರಿಕ್ತರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

Published On :
ಬೆಂಗಳೂರು: ಪ್ರತಿಭಟನೆಯಲ್ಲಿ ತೊಡಗಿದ್ದ ಉದ್ರಿಕ್ತರ ಗುಂಪೊಂದು ಹೊಯ್ಸಳ ವಾಹನಕ್ಕೆ ಬೆಂಕಿ ಹಚ್ಚಿದ್ದರಿಂದ ಉದ್ರಿಕ್ತರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ವಿರೋಧಿಸಿ ಇಂದು ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರು ತಮಿಳುನಾಡು ನೋಂದಣಿ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಮೀಸಲು ಪಡೆ ಮುಂದಾಗಿದ್ದರಿಂದ ಉದ್ರಿಕ್ತರ ಗುಂಪು ಹೊಯ್ಸಳ ವಾಹನಕ್ಕೆ ಬೆಂಕಿ ಹಚ್ಚಿದ್ದು ಉದ್ರಿಕ್ತರ ಮೇಲೆ ಸಿಬ್ಬಂದಿ ಗುಂಡು ಹಾರಿಸಿದ್ದರಿಂದ ಒಬ್ಬ ವ್ಯಕ್ತಿ ಸಾವಿಗೀಡಾಗಿ ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಉಮೇಶ್ ಎಂದು ಗುರುತಿಸಲಾಗಿದೆ.
ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


