"ಕಾವೇರಿ" ಮಧ್ಯಂತರ ಅರ್ಜಿ ವಿಚಾರಣೆ; ನಮ್ಮ ಮೆಟ್ರೋ ಸಂಚಾರ ಸ್ಥಗಿತ
ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದ್ದ ಪರಿಣಾಮ, ಮುಂಜಾಕ್ರತಾ ಕ್ರಮವಾಗಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದ್ದ ಪರಿಣಾಮ, ಮುಂಜಾಕ್ರತಾ ಕ್ರಮವಾಗಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ವಿಚಾರಣೆ ತೀರ್ಪು ಹೊರ ಬೀಳುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಹಲವೆಡೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸುವಂತೆ ಬಿಎಂಆರ್ ಸಿಎಲ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಬೆಂಗಳೂರಿನ ಎಲ್ಲ ಮೆಟ್ರೋ ನಿಲ್ದಾಣಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸುವಂತೆ ಅಧಿಕಾರಿಗಳು ಸರ್ಕಾರವನ್ನು ಕೋರಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


