ಸಹಜ ಸ್ಥಿತಿಗೆ ಬೆಂಗಳೂರು: ನಾಳೆ ಸರ್ಕಾರಿ ಶಾಲಾ-ಕಾಲೇಜುಗಳ ರಜೆ ಹಿಂಪಡೆದ ಜಿಲ್ಲಾಡಳಿತ
ಕಾವೇರಿ ವಿವಾದದಿಂದಾಗಿ ಸೋಮವಾರ ಭುಗಿಲೆದ್ದಿದ್ದ ಹಿಂಸಾಚಾರದಿಂದಾಗಿ ಜಿಲ್ಲಾಡಳಿತ ಬುಧವಾರ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಇಂದು...

ಬೆಂಗಳೂರು: ಕಾವೇರಿ ವಿವಾದದಿಂದಾಗಿ ಸೋಮವಾರ ಭುಗಿಲೆದ್ದಿದ್ದ ಹಿಂಸಾಚಾರದಿಂದಾಗಿ ಜಿಲ್ಲಾಡಳಿತ ಬುಧವಾರ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಇಂದು ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದ ಕಾರಣ ಇದೀಗ ರಜೆಯನ್ನು ಜಿಲ್ಲಾಡಳಿತ ಹಿಂಪಡೆದಿದೆ.
ನಿನ್ನೆ ಬೆಂಗಳೂರು ಅಕ್ಷರಶಃ ಹಿಂಸಾಚಾರಕ್ಕೆ ಒಳಗಾಗಿದ್ದರಿಂದ ನಗರ ಪೊಲೀಸ್ ಆಯುಕ್ತ ಎಂ.ಎನ್. ಮೇಘರಿಕ್ ಅವರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದರಿಂದ ನಾಳೆ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಿದ್ದ ರಜೆಯನ್ನು ಜಿಲ್ಲಾಡಳಿತ ಹಿಂಪಡೆದಿದೆ ಎಂದು ನಗರ ಜಿಲ್ಲಾಧಿಕಾರಿ ವಿ ಶಂಕರ್ ಸ್ಪಷ್ಟಪಡಿಸಿದ್ದಾರೆ.
ನಾಳೆ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಇದನ್ನು ಅನುಸರಿಸಿ ಖಾಸಗಿ ಶಾಲಾ-ಕಾಲೇಜುಗಳಿಗೂ ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿತ್ತು. ಆದರೆ ಇದೀಗ ಜಿಲ್ಲಾಡಳಿತ ರಜೆಯನ್ನು ಹಿಂಪಡೆದಿರುವುದರಿಂದ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಅವರು ಗೊಂದಲಕ್ಕೆ ಸಿಲುಕಿದ್ದು, ತಮ್ಮ ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರ ಆಯಾ ಶಾಲೆಗಳಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಆದರೆ ನಾಳೆ ಪರಿಸ್ಥಿತಿ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಶಶಿಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


