ರಾಜ್ಯ

ಮೈಸೂರು: ಪ್ರೀತಿಗೆ ಒತ್ತಾಯ; ಸೀಮೆಎಣ್ಣೆ ಸುರಿದುಕೊಂಡು ಅಪ್ರಾಪ್ತ ಯುವತಿ ಆತ್ಮಹತ್ಯೆ

ಪ್ರೀತಿಸುವಂತೆ ಯುವಕನೊಬ್ಬ ಬೆನ್ನುಬಿದ್ದಿದ್ದರಿಂದ ಮನನೊಂದು 17 ವರ್ಷ ಪ್ರಾಯದ ವಿದ್ಯಾರ್ಥಿನಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ...

ಮೈಸೂರು: ಪ್ರೀತಿಗೆ ಒತ್ತಾಯ; ಸೀಮೆಎಣ್ಣೆ ಸುರಿದುಕೊಂಡು ಅಪ್ರಾಪ್ತ ಯುವತಿ ಆತ್ಮಹತ್ಯೆ
ಆತ್ಮಹತ್ಯೆಗೆ ಶರಣಾದ ಯುವತಿ
Published On :
ಮೈಸೂರು: ಯುವಕನೊಬ್ಬ ಪ್ರೀತಿಸುವಂತೆ ಪೀಡಿಸುತ್ತಿದ್ದರಿಂದ ಮನನೊಂದು 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. 
ಮೈಸೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಹುಣಸೂರಿನ ಅಂಕನಹಳ್ಳಿಯ ಸೌಂದರ್ಯ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಸೌಂದರ್ಯಳನ್ನು ಕಳೆದ ಮೂರು ತಿಂಗಳಿನಿಂದ ಮನುಗನಹಳ್ಳಿಯ ಕಿರಣ್ ಎಂಬ ಯುವಕ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿದ್ದು ಪ್ರೀತಿ ಮಾಡದಿದ್ದರೆ ಆ್ಯಸಿಡ್ ಎರಚುವುದಾಗಿಯೂ ಬೆದರಿಕೆ ಹಾಕಿದ್ದ ಇದರಿಂದ ಜೀವಭಯದಲ್ಲಿದ್ದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. 
ಈ ವಿಚಾರವನ್ನು ಸೌಂದರ್ಯ ಮನೆಯವರಿಗೆ ತಿಳಿಸಿದ್ದಳು. ನಂತರ ಕಿರಣ್ ಮನೆಯವರಿಗೂ ವಿಷಯ ತಿಳಿಸಿ ಬುದ್ಧಿವಾದ ಹೇಳಿದ್ದರು. ಆದರೆ ಹುಚ್ಚು ಪ್ರೀತಿಯಲ್ಲಿದ್ದ ಕಿರಣ್ ಸೌಂದರ್ಯಳನ್ನು ಹಿಂಬಾಲಿಸುವುದನ್ನು ನಿಲ್ಲಿಸಲಿಲ್ಲ. ಆತನ ಕಿರುಕುಳದಿಂದ ತೀವ್ರವಾಗಿ ನೊಂದಿದ್ದ ಸೌಂದರ್ಯ ಕಾಲೇಜು ಶಿಕ್ಷಣವನ್ನೇ ಮೊಟಕುಗೊಳಿಸಿ ಮನೆಯಲ್ಲಿದ್ದಳು. 
ಇದರಿಂದ ತೀವ್ರವಾಗಿ ಮನನೊಂದಿದ್ದ ಆಕೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ತೀವ್ರವಾಗಿ ಸುಟ್ಟು ಗಾಯಗಳಿಂದ ಬಳಲುತ್ತಿದ್ದ ಸೌಂದರ್ಯಳನ್ನು ಕಾಲೇಜು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೌಂದರ್ಯ ಮೃತಪಟ್ಟಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.