ವೈರಲ್ ಆದ ಹಳೆಯ ವಿಡಿಯೋ; ಬೆಂಗಳೂರು ಶಾಂತಿ ಕದಡಲು ಕಿಡಿಗೇಡಿಗಳ ಯತ್ನ!
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾದ ಬೆನ್ನಲ್ಲೇ ಹೊತ್ತಿ ಉರಿದಿದ್ದ ಬೆಂಗಳೂರು ಈಗಷ್ಟೇ ಶಾಂತಿಯುತವಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಶಾಂತಿಗೆ ಭಂಗತರಲು ಕೆಲ ಕಿಡಿಗೇಡಿಗಳು ಯತ್ನಿಸಿದ್ದಾರೆ...

ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾದ ಬೆನ್ನಲ್ಲೇ ಹೊತ್ತಿ ಉರಿದಿದ್ದ ಬೆಂಗಳೂರು ಈಗಷ್ಟೇ ಶಾಂತಿಯುತವಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಬೆಂಗಳೂರು ಶಾಂತಿಗೆ ಭಂಗತರಲು ಕೆಲ ಕಿಡಿಗೇಡಿಗಳು ಯತ್ನಿಸಿದ್ದಾರೆ.
ಖ್ಯಾತ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಹಾಗೂ ವಾಟ್ಸಪ್ ಗಳಲ್ಲಿ ಆಟೋದಲ್ಲಿ ಬಂದ ಮಹಿಳೆಯರನ್ನು ದುಷ್ಕರ್ಮಿಗಳು ಥಳಿಸುತ್ತಿರವ ವಿಡಿಯೋವನ್ನು ಹಾಕಿ ಅದಕ್ಕೆ ಕನ್ನಡಿಗ ಮತ್ತು ತಮಿಳರ ನಡುವಿನ ಸಂಘರ್ಷದ ಲೇಪನ ಮಾಡಿ ವಿಡಿಯೋ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ವಾಯ್ಸಪ್ ಮತ್ತು ಫೇಸ್ ಬುಕ್ ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಆದರೆ ಸತ್ಯಾಂಶವೇನು ಎಂದರೆ ಕಾವೇರಿ ವಿವಾದಕ್ಕೂ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋಗೂ ಯಾವುದೇ ಸಂಬಂಧವಿಲ್ಲ. ಇಷ್ಟಕ್ಕೂ ಈ ವಿಡಿಯೋ ಯೂಟ್ಯೂಬ್ ನಲ್ಲಿ ಅಪ್ಲೋಡ್ ಆಗಿರುವುದೇ 2014 ಏಪ್ರಿಲ್ ತಿಂಗಳಲ್ಲಿ. ಆದರೆ ಇದೇ ವಿಡಿಯೋವನ್ನು ತಮ್ಮ ಕುಕೃತ್ಯಕ್ಕೆ ಬಳಕೆ ಮಾಡಿಕೊಂಡಿರುವ ಕಿಡಿಗೇಡಿಗಳು ಆಟೋದಲ್ಲಿ ಥಳಿತಕ್ಕೊಳಗಾಗಿರುವ ಹೆಣ್ಣುಮಗಳು ಕನ್ನಡತಿಯರಾಗಿದ್ದು, ತಮಿಳರು ಆಕೆ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಆದರೆ ಈ ವಿಡಿಯೋ ವೈಯುಕ್ತಿಕ ಜಗಳದ್ದಾಗಿದ್ದು, ಈ ವಿಡಿಯೋಗೂ ಕಾವೇರಿ ಗಲಾಟೆಗೂ ಯಾವುದೇ ಸಂಬಂಧವಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


