ಕಾವೇರಿಗಾಗಿ ರೈಲು ಬಂದ್; ಮಂಡ್ಯದಲ್ಲಿ ರೈಲು ತಡೆಯಲೆತ್ನಿಸಿದ 6 ಮಂದಿ ವಶಕ್ಕೆ
ಕಾವೇರಿ ನದಿ ನೀರಿಗಾಗಿ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಗುರುವಾರ ಕನ್ನಡಪರ ಕರೆ ನೀಡಿರುವ ರೈಲ್ ರೋಕೋ ಚಳವಳಿಯಲ್ಲಿ ಭಾಗಿಯಾಗಿದ್ದ 6 ಮಂದಿ ಕನ್ನಡಪರ ಹೋರಾಟಗಾರರನ್ನು ಮಂಡ್ಯದಲ್ಲಿ ವಶಕ್ಕೆ ಪಡೆಯಲಾಗಿದೆ.

ಮಂಡ್ಯ: ಕಾವೇರಿ ನದಿ ನೀರಿಗಾಗಿ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಗುರುವಾರ ಕನ್ನಡಪರ ಕರೆ ನೀಡಿರುವ ರೈಲ್ ರೋಕೋ ಚಳವಳಿಯಲ್ಲಿ ಭಾಗಿಯಾಗಿದ್ದ 6 ಮಂದಿ ಕನ್ನಡಪರ ಹೋರಾಟಗಾರರನ್ನು ಮಂಡ್ಯದಲ್ಲಿ ವಶಕ್ಕೆ ಪಡೆಯಲಾಗಿದೆ.
ಕನ್ನಡಪರ ಸಂಘಟನೆಗಳು ಕರೆ ನೀಡಿರುವ ರೈಲ್ ರೋಕೋ ಚಳವಳಿ ನಿಮಿತ್ತ ಇಂದು ಮಂಡ್ಯ ರೈಲು ನಿಲ್ದಾಣದಲ್ಲಿ ರೈಲು ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ 6 ಮಂದಿ ಕನ್ನಡಪರ ಹೋರಾಟಗಾರರನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಪ್ಪು ಬಾವುಟ ಪ್ರದರ್ಶಿಸಿ ನಿಲ್ದಾಣ ಪ್ರವೇಶಕ್ಕೆ ಕಾರ್ಯಕರ್ತರು ಯತ್ನಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ ನಿಲ್ದಾಣದ ಆವರಣ ಪ್ರವೇಶಿಸಿದ ಪ್ರತಿಭಟನಾಕಾರರನ್ನು ಅಲ್ಲಿಯೇ ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಕೋಲಾರದಲ್ಲಿಯೂ ರೈಲ್ ರೋಕೊ ಚಳವಳಿಗೆ ಚಾಲನೆ ನೀಡಲಾಗಿದ್ದು, ಕೋಲಾರ ರೈಲ್ವೇ ನಿಲ್ದಾಣದ ಬಳಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ. ನೂರಾರು ಸಂಖ್ಯೆಯಲ್ಲಿರುವ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಕೋಲಾರ ರೈಲ್ವೇ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ಹಾಗೂ ತಮಿಳುನಾಡು ಸಿಎಂ ಜಯಲಲಿತಾ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಇದಲ್ಲದೆ ಮೈಸೂರು, ಮಡಿಕೇರಿ ಸೇರಿದಂತೆ ರಾಜ್ಯದ ವಿವಿಧ ಪ್ರಮುಖ ನಗರಗಳ ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


