ರಾಜ್ಯ

ಅಪಘಾತದಲ್ಲಿ ವಿಜಯಪುರ ಲೋಕಾಯುಕ್ತ ಎಸ್ಪಿ ಸಾವು

ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ವಿಜಯಪುರ ಲೋಕಾಯುಕ್ತ ಎಸ್‌‌ಪಿ ಸ್ಥಳದಲ್ಲೇ ಸಾವನ್ನಪ್ಪಿ..

ಅಪಘಾತದಲ್ಲಿ ವಿಜಯಪುರ ಲೋಕಾಯುಕ್ತ ಎಸ್ಪಿ ಸಾವು
ಸಾಂದರ್ಭಿಕ ಚಿತ್ರ
Published On :

ಹಾವೇರಿ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ವಿಜಯಪುರ ಲೋಕಾಯುಕ್ತ ಎಸ್‌‌ಪಿ ಸ್ಥಳದಲ್ಲೇ ಸಾವನ್ನಪ್ಪಿ, 12 ಜನರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಲೋಕಾಯುಕ್ತ ಎಸ್ಪಿ ಎಂ.ಬಿ. ಪಾಟೀಲ್‌‌ ಬೆಳಗಾವಿಯಿಂದ ಬೆಂಗಳೂರಿಗೆ ಮೀಟಿಂಗ್‌‌‌ಗಾಗಿ ತೆರಳುತ್ತಿದ್ದಾಗ ಘಟನೆ ನಡೆದಿದೆ.

2016ರ ಜ. 21ರಂದು ವಿಜಯಪುರ ಲೋಕಾಯುಕ್ತ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ಪಾಟೀಲ್‌‌ ಅವರು ಕಲಬುರಗಿ, ಬೀದರ್, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಪ್ರಭಾರ ಲೋಕಾಯುಕ್ತ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಇನ್ನೊಂದು ವರ್ಷದಲ್ಲಿ ನಿವೃತ್ತಿಯಾಗುವುದರಲ್ಲಿದ್ದರು.

ನಿಂತ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಮಧ್ಯೆ ಅಪಘಾತ ವೀಕ್ಷಿಸುತ್ತಿದ್ದ ಟಿಟಿ ವಾಹನಕ್ಕೆ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟಿಟಿಯಲ್ಲಿದ್ದ 9 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಸ್ಥಳಕ್ಕೆ ಎಸ್ಪಿ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹಾವೇರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದೇ ಸ್ಥಳದಲ್ಲಿ ಪದೇ ಪದೆ ಅಪಘಾತಗಳಾಗುತ್ತಿವೆ. ಇಲ್ಲಿ ಯಾವುದೇ ಮುನ್ಸೂಚನಾ ಫಲಕಗಳಿಲ್ಲದಿರುವುದು ಅಪಘಾತ ಹೆಚ್ಚಳಕ್ಕೆ ಕಾರಣವಾಗಿದೆ. ಈ ಸ್ಥಳದಲ್ಲಿ ಎಚ್ಚರಿಕೆ ಫಲಕಗಳನ್ನು ಹಾಕುವ ಮೂಲಕ ಅಪಘಾತಗಳ ಸಂಖ್ಯೆ ಕಡಿಮೆ ಮಾಡುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.