ಕಾವೇರಿ ಮೇಲುಸ್ತುವಾರಿ ಸಭೆ; ಮಂಡ್ಯ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ
ಸೋಮವಾರ ಮತ್ತೆ ಕಾವೇರಿ ಮೇಲುಸ್ತುವಾರಿ ಸಭೆ ನಡೆಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯಲ್ಲಿ ಘೋಷಣೆ ಮಾಡಲಾಗಿದ್ದ ರಜೆಯನ್ನು ವಿಸ್ತರಣೆ ಮಾಡಲಾಗಿದೆ.

ಮಂಡ್ಯ: ಸೋಮವಾರ ಮತ್ತೆ ಕಾವೇರಿ ಮೇಲುಸ್ತುವಾರಿ ಸಭೆ ನಡೆಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯಲ್ಲಿ ಘೋಷಣೆ ಮಾಡಲಾಗಿದ್ದ ರಜೆಯನ್ನು ವಿಸ್ತರಣೆ ಮಾಡಲಾಗಿದೆ.
ಶಾಲಾ-ಕಾಲೇಜುಗಳ ರಜೆ ವಿಸ್ತರಣೆ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಅವರು ಆದೇಶ ನೀಡಿದ್ದು, ಮತ್ತೆರಡು ದಿನಗಳಕಾಲ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಮಂಡ್ಯದ ಮದ್ದೂರು, ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಮಳ್ಳವಳ್ಳಿ ಹಾಗೂ ಕೆಆರ್ ಪೇಟೆಯ ವ್ಯಾಪ್ತಿಯಲ್ಲಿರುವ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಮುಂದುವರೆಸಲಾಗಿದೆ.
ಕಳೆದ ಸೆಪ್ಟೆಂಬರ್ 5ರಂದು ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಬಳಿಕ ಮಂಡ್ಯ ಜಿಲ್ಲೆ ಉದ್ವಿಗ್ನಗೊಂಡಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ನಾಳೆ ಮತ್ತೆ ಕಾವೇರಿ ಮೇಲುಸ್ತುವಾರಿ ಸಭೆ ನಡೆಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


