ಚಲಿಸುತ್ತಿದ್ದ ಕಾರಿನಲ್ಲೇ ಯುವತಿಯರ ಚುಂಬನ; ಆರ್ ಟಿ ನಗರದಲ್ಲಿ ಸರಣಿ ಅಪಘಾತ!
ಬೆಂಗಳೂರಿನ ಆರ್ ಟಿ ನಗರದಲ್ಲಿ ಕಳೆದ ರಾತ್ರಿ ಸರಣಿ ಅಪಘಾತವಾಗಿದ್ದು, ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಯುವತಿಯರು ಅಪಘಾತ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಆರ್ ಟಿ ನಗರದಲ್ಲಿ ಕಳೆದ ರಾತ್ರಿ ಸರಣಿ ಅಪಘಾತವಾಗಿದ್ದು, ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಯುವತಿಯರು ಅಪಘಾತ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ.
ಆರ್ ಟಿ ನಗರ ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಅಪಘಾತ ಮಾಡಿದ ಕಾರು ಚಾಲಕಿಯನ್ನು ಶಾಲಿನಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ತನ್ನ ಇಬ್ಬರು ಸ್ನೇಹಿತೆಯರೊಂದಿಗೆ ಹೊಂಡಾ ಸಿಟಿ ಕಾರಿನಲ್ಲಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಶಾಲಿನಿ, ಆರ್ ಟಿ ನಗರದ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಒಂದು ಬೈಕ್ ಹಾಗೂ ಕಾರಿಗೆ ಢಿಕ್ಕಿ ಹೊಡೆದಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಅದೇ ಕಾರಿನ ಹಿಂಬದಿಯಲ್ಲಿ ಕಾರಿನಲ್ಲಿ ಬರುತ್ತಿದ್ದ ಫರ್ಹಾನ್ ಎಂಬಾತ ಯುವತಿಯರ ಕಾರನ್ನು ಸುಮಾರು ಅರ್ಧ ಕಿ.ಮೀ ದೂರ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರಿಗೆ ಅಪಘಾತದ ಕುರಿತು ಮಾಹಿತಿ ನೀಡಿದ ಫರ್ಹಾನ್, ಕಾರು ಚಲಾವಣೆ ವೇಳೆ ಯುವತಿಯರು ಕಂಠಪೂರ್ತಿ ಕುಡಿದಿದ್ದರು. ಅಪಘಾತವಾಗುವ ವೇಳೆ ಯುವತಿಯರು ಚಲಿಸುತ್ತಿದ್ದ ಕಾರಿನಲ್ಲೇ ಪರಸ್ಪರ ಚುಂಬಿಸಿಕೊಂಡಿದ್ದರಿಂದ ರಸ್ತೆ ಕಾಣದೆ ಕಾರು ಹಾಗೂ ಬೈಕ್ ಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಹೇಳಿದ್ದಾರೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಆರ್ ಟಿ ನಗರ ಸಂಚಾರಿ ಠಾಣಾ ಪೊಲೀಸರು ಯುವತಿಯರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು, ಮೂವರ ಪೈಕಿ ಕಾರು ಚಲಾಯಿಸುತ್ತಿದ್ದ ಶಾಲಿನಿ ಮದ್ಯ ಸೇವಿಸಿರಲಿಲ್ಲ ಎಂಬ ಮಾಹಿತಿಯನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ಆಕ್ಷೇಪವೆತ್ತಿರುವ ಫರ್ಹಾನ್, ತಾವು ಬೆನ್ನಟ್ಟಿದ ವೇಳೆ ಕಾರು ಚಾಲಾಯಿಸುತ್ತಿದ್ದ ಶಾಲಿನಿ ಕೂಡ ಮದ್ಯ ಸೇವಿಸುತ್ತಿದ್ದರು ಎಂದು ಹೇಳಿದ್ದಾರೆ. ವೈದ್ಯರಿಗೆ ಹಣ ನೀಡಿ ವರದಿ ಮಾರ್ಪಡಿಸಲಾಗಿದೆ ಎಂದು ಫರ್ಹಾನ್ ಆರೋಪಿಸಿದ್ದಾರೆ.
ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿಯರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


