ರತ್ನ ಪ್ರಭಾರನ್ನು ಮುಖ್ಯಕಾರ್ಯದರ್ಶಿ ಮಾಡಿ: ಸಿಎಂಗೆ ಬಿಎಸ್'ವೈ
ಸೆ.30 ಕ್ಕೆ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ಅವರು ನಿವೃತ್ತಿಗೊಳ್ಳಲಿದ್ದು, ಮುಂದಿನ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರತ್ನ ಪ್ರಭಾ ಅವರನ್ನು ನೇಮಕ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ...

ಬೆಂಗಳೂರು: ಸೆ.30 ಕ್ಕೆ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ಅವರು ನಿವೃತ್ತಿಗೊಳ್ಳಲಿದ್ದು, ಮುಂದಿನ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರತ್ನ ಪ್ರಭಾ ಅವರನ್ನು ನೇಮಕ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.
ಸೆ.30 ರಂದು ರಾಜ್ಯ ಸರ್ಕಾರಿದ ಹಾಲಿ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಅವರು ತಮ್ಮ ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಅವರ ಸ್ಥಾನಕ್ಕೆ 1981 ಶ್ರೇಣಿಯ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಕುಂಟಿಯಾ ಅವರನ್ನು ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿವೆ ಎಂದು ಕೆಲ ವರದಿಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕಾರಿ ಸಭೆ ಬಳಿಕ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರಿಯೊಬ್ಬರನ್ನು ನೇಮಕ ಮಾಡಲು ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ. ರತ್ನಪ್ರಭಾ ಅವರು ಉತ್ತಮ ಅಧಿಕಾರಿಯಾಗಿದ್ದು, ಸಾಕಷ್ಟು ಜಿಲ್ಲೆಗಳಲ್ಲಿ ಉಪ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ. ಸಾಕಷ್ಟು ಇಲಾಖೆಗಳಲ್ಲೂ ಉನ್ನತ ಮಟ್ಟದಲ್ಲಿ ಶ್ರೇಣಿಯನ್ನುಗಳಿಸಿದ್ದಾರೆ. ದಲಿತ ಮಹಿಳಾ ಅಧಿಕಾರಿಯೊಬ್ಬರನ್ನು ಯಾವುದೇ ಕಾರಣಕ್ಕೂ ತಿರಸ್ಕರಿಸಬಾರದು. ಮುಖ್ಯ ಕಾರ್ಯದರ್ಶಿ ಹುದ್ದೆಗೆ ರತ್ನ ಪ್ರಭಾ ಅವರು ಅರ್ಹರಾಗಿದ್ದು, ರತ್ನ ಪ್ರಭಾ ಅವರನ್ನೇ ಮುಖ್ಯ ಕಾರ್ಯದರ್ಶಿಯಾಗಿಸಬೇಕೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


