ರಾಜ್ಯ

ಸುಳ್ಯ: ಹಾಡುಹಗಲೇ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಬರ್ಬರ ಹತ್ಯೆ

ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಎಂಬುವರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುಳ್ಯದ ಐವರ್ನಾಡಿನಲ್ಲಿ...

ಸುಳ್ಯ: ಹಾಡುಹಗಲೇ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಬರ್ಬರ ಹತ್ಯೆ
ಇಸ್ಮಾಯಿಲ್
Published On :
ಸುಳ್ಯ: ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಎಂಬುವರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುಳ್ಯದ ಐವರ್ನಾಡಿನಲ್ಲಿ ನಡೆದಿದೆ. 
ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹೊರ ಬರುತ್ತಿದ್ದ ಇಸ್ಮಾಯಿಲ್ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಕತ್ತಿನ ಭಾಗಕ್ಕೆ ತೀವ್ರವಾದ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 
ಎರಡು ವರ್ಷದ ಹಿಂದೆಯೂ ಸುಳ್ಯದ ಗಾಂಧಿನಗರದಲ್ಲಿ ಇಸ್ಮಾಯಿಲ್ ಮೇಲೆ ಹತ್ಯೆ ಪ್ರಯತ್ನ ನಡೆದಿತ್ತು. ಬಳಿಕ ಅವರಿಗೆ ಗನ್ ಮ್ಯಾನ್ ನೀಡಲಾಗಿತ್ತು. ಇಂದು ಪ್ರಾರ್ಥನೆಗೆ ತೆರಳಿದ್ದ ಇಸ್ಮಾಯಿಲ್ ಅವರ ಜತೆ ಗನ್ ಮ್ಯಾನ್ ಇರಲಿಲ್ಲ ಎಂದು ಹೇಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.