ರಾಜ್ಯ

ದಿ.ಕಲ್ಲಪ್ಪ ಹಂಡಿಭಾಗ್ ಪತ್ನಿ ವಿದ್ಯಾಗೆ ಉಪ ನೋಂದಣಾಧಿಕಾರಿ ಹುದ್ದೆ ನೀಡಿದ ಸಿಎಂ

ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಪತ್ನಿ ವಿದ್ಯಾ ಕಲ್ಲಪ್ಪ ಹಂಡಿಭಾಗ್ ಅವರಿಗೆ ರಾಜ್ಯ ಸರ್ಕಾರ...

ದಿ.ಕಲ್ಲಪ್ಪ ಹಂಡಿಭಾಗ್ ಪತ್ನಿ ವಿದ್ಯಾಗೆ ಉಪ ನೋಂದಣಾಧಿಕಾರಿ ಹುದ್ದೆ ನೀಡಿದ ಸಿಎಂ
ಕಲ್ಲಪ್ಪ ಕುಟುಂಬದ ಜೊತೆ ಸಿಎಂ
Published On :
ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಪತ್ನಿ ವಿದ್ಯಾ ಕಲ್ಲಪ್ಪ ಹಂಡಿಭಾಗ್ ಅವರಿಗೆ ರಾಜ್ಯ ಸರ್ಕಾರ ಸೋಮವಾರ ಉಪ ನೋಂದಣಾಧಿಕಾರಿ ಹುದ್ದೆ ನೀಡಿದೆ.
ವಿದ್ಯಾ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಮೃತ ಡಿವೈಎಸ್ಪಿ ಪತ್ನಿಗೆ ನೇಮಕಾತಿ ಆದೇಶವನ್ನು ಹಸ್ತಾಂತರಿಸಿದರು.
ತಮ್ಮ ವಿರುದ್ಧ ಲಂಚ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಠಾಣಾ ವ್ಯಾಪ್ತಿಯಲ್ಲಿರುವ ಮಾವನ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಂದಿಗುಂದ ಗ್ರಾಮದವರಾದ ಕಲ್ಲಪ್ಪ ಹಂಡಿಭಾಗ್ ಅವರು ಮೂರು ವರ್ಷಗಳ ಹಿಂದೆ ಮುರಗೋಡ ಗ್ರಾಮದ ವಿದ್ಯಾ ಎಂಬುವವರನ್ನು ವಿವಾಹವಾಗಿದ್ದರು. ಕಲ್ಲಪ್ಪ, ವಿದ್ಯಾ ದಂಪತಿಗೆ 1 ವರ್ಷದ ಗಂಡು ಮಗುವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.