ರಾಜ್ಯ

ಕಾವೇರಿ ವಿವಾದದಲ್ಲಿ ಪಿಎಂ ಮಧ್ಯಪ್ರವೇಶಿಸಲೇ ಬೇಕು: ಶಶಿ ತರೂರ್

ಸಾಮಾನ್ಯ ನೆಲೆಗಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಮಧ್ಯ ಪ್ರವೇಶಿಸಿ, ಎರಡು ರಾಜ್ಯಗಳ ನಡುವೆ ಭುಗಿಲೆದ್ದಿರುವ ...

ಕಾವೇರಿ ವಿವಾದದಲ್ಲಿ ಪಿಎಂ ಮಧ್ಯಪ್ರವೇಶಿಸಲೇ ಬೇಕು: ಶಶಿ ತರೂರ್
ಶಶಿ ತರೂರ್
Published On :

ಬೆಂಗಳೂರು: ಸಾಮಾನ್ಯ ನೆಲೆಗಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಮಧ್ಯ ಪ್ರವೇಶಿಸಿ, ಎರಡು ರಾಜ್ಯಗಳ ನಡುವೆ ಭುಗಿಲೆದ್ದಿರುವ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಬೆಂಗಳೂರಿನ ಸಿಂಬಿಯೋಸಿಸ್ ಸ್ಕೂಲ್ ಆಫ್ ಮೀಡಿಯಾ ಅಂಡ್ ಕಮ್ಯುನಿಕೇಶಷನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು , ಪ್ರಧಾನ ಮಂತ್ರಿಗಳ ವಿದೇಶ ಪ್ರವಾಸ, ಸಾಮಾಜಿಕ ಮಾಧ್ಯಮ, ಇಂಡೋ- ಪಾಕ್ ಯುದ್ಧ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ, ಬಲೋಚಿಸ್ತಾನ ಸಮಸ್ಯೆ, ಅಮೇರಿಕ ಅಧ್ಯಕ್ಷೀಯ ಚುನಾವಣೆ ಮತ್ತು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಇನ್ನೂ ಕಾಶ್ಮೀರ ಸಮಸ್ಯೆ ಬಗ್ಗೆ ಮಾತನಾಡಿದ ತರೂರ್, ನಮ್ಮ ದೇಶಗಳು ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಸಾಧಿಸಬೇಕಾದರೇ ಎರಡೂ ರಾಷ್ಟ್ರಗಳು ಶಾಂತಿಯಿಂದಿರಬೇಕು ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.