ಗೋಕರ್ಣ ದೇವಾಲಯವನ್ನು ಮತ್ತೆ ಸರ್ಕಾರದ ವಶಕ್ಕೆ ನೀಡಲು ಶ್ರೀಗಳ ವಿರೋಧ
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರ ಮರಳಿ ತನ್ನ ವಶಕ್ಕೆ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಹೊಸನಗರ ...

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರ ಮರಳಿ ತನ್ನ ವಶಕ್ಕೆ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ವಿರೋಧ ವ್ಯಕ್ತ ಪಡಿಸಿದ್ದಾರೆ.
ಗಿರಿನಗರದ ಶ್ರೀರಾಮಚಂದ್ರಾಪುರ ಮಠದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ದೇವಾಲಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಹಿಂಪಡೆಯುವ ತೀರ್ಮಾನ ತೆಗೆದುಕೊಳ್ಳಬಾರದು ಎಂದು ಆಗ್ರಹಿಸಿದರು.
ಹೈಕೋರ್ಟ್‌ನಲ್ಲಿ ಈ ಸಂಬಂಧ ವ್ಯಾಜ್ಯದ ವಿಚಾರಣೆ ನಡೆಯುವಾಗ ಅಡ್ವೊಕೇಟ್ ಜನರಲ್ ಅವರು, ದೇವಸ್ಥಾನವನ್ನು ಮಠಕ್ಕೆ ವಹಿಸಿಕೊಟ್ಟ ತೀರ್ಮಾನದ ಕುರಿತಂತೆ ಪುನರ್ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಾಸ್ತವದಲ್ಲಿ ದೇವಸ್ಥಾನವನ್ನು ಸ್ವಾಧೀನಕ್ಕೆ ವಹಿಸಿಕೊಡಿ ಎಂದು ನಾವು ಯಾವತ್ತೂ ಸರ್ಕಾರವನ್ನು ಕೇಳಿಕೊಂಡಿರಲಿಲ್ಲ. ಬದಲಾಗಿ ಎಂಟು ವರ್ಷಗಳ ಹಿಂದೆ ಸರ್ಕಾರವೇ ದೇವಾಲಯ ಮಠದ್ದು ಎಂದು ನ್ಯಾಯಾಲಯದಲ್ಲಿ ಅಫಿಡೆವಿಟ್ ಸಲ್ಲಿಸಿತ್ತು ಎಂದರು.
2008ರಲ್ಲಿ ದೇವಸ್ಥಾನ ಉಸ್ತುವಾರಿಯನ್ನು ಮಠ ವಹಿಸಿಕೊಂಡಾಗ ಅನೇಕ ಸಮಸ್ಯೆಗಳಿದ್ದವು. ಸ್ವಚ್ಛತೆ ಕಡೆಗಣಿಸಲಾಗಿತ್ತು. ಕಾಣಿಕೆಯಾಗಿ ಬರುತ್ತಿದ್ದ ಹಣಕ್ಕೆ ಲೆಕ್ಕ ಇಡುವ ವ್ಯವಸ್ಥೆ ಇರಲಿಲ್ಲ. ಇದಕ್ಕೆ ಮಠದ ಆಡಳಿತ ಮಂಡಳಿ ಕಡಿವಾಣ ಹಾಕಿತ್ತು. ಪ್ರತಿಯೊಂದಕ್ಕೂ ರಸೀದಿ ವ್ಯವಸ್ಥೆ ಮಾಡಲಾಯಿತು.ಭಕ್ತರಿಗೆ ಅನ್ನದಾನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಯೋಜನೆ ಜಾರಿಗೆ ತರಲಾಯಿತು. ಇದನ್ನು ಸಹಿಸದ ಕೆಲವರು, ಮಠದ ಹಿಡಿತದಿಂದ ದೇವಸ್ಥಾನ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ. ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


