"ಕಾವೇರಿ" ಮಧ್ಯಸ್ಥಿಕೆಗೆ "ಸುಪ್ರೀಂ" ಆದೇಶ; ಉಮಾಭಾರತಿ ನೇತೃತ್ವದಲ್ಲಿ ಸೆ.29ರಂದು ಸಭೆ
ಕಾವೇರಿ ವಿವಾದ ಸಂಬಂಧ ಆರಂಭದಿಂದಲೂ ಮಧ್ಯಸ್ಥಿಕೆ ವಹಿಸುವಂತೆ ಕೇಳುತ್ತಿದ್ದ ಕರ್ನಾಟಕದ ಮನವಿಗೆ ಸುಪ್ರೀಂಕೋರ್ಟ್ ಬೆಂಬಲ ನೀಡಿದ್ದು, ಸಂಧಾನ ಸಭೆ ನಡೆಸುವಂತೆ ಸೂಚನೆ ನೀಡಿದೆ.

ನವದೆಹಲಿ: ಕಾವೇರಿ ವಿವಾದ ಸಂಬಂಧ ಆರಂಭದಿಂದಲೂ ಮಧ್ಯಸ್ಥಿಕೆ ವಹಿಸುವಂತೆ ಕೇಳುತ್ತಿದ್ದ ಕರ್ನಾಟಕದ ಮನವಿಗೆ ಸುಪ್ರೀಂಕೋರ್ಟ್ ಬೆಂಬಲ ನೀಡಿದ್ದು, ಸಂಧಾನ ಸಭೆ ನಡೆಸುವಂತೆ ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ನಾಳೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿಗಳ ಸಭೆ ಕರೆಯಲಾಗಿದ್ದು, ಕಾವೇರಿ ನೀರು ಹಂಚಿಕೆ ಕುರಿತ ಸಮಸ್ಯೆ ನಿವಾರಣೆ ಕುರಿತಂತೆ ಚರ್ಚಿಸಲಾಗುತ್ತದೆ. ನವದೆಹಲಿಯಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಶ್ರಮಶಕ್ತಿ ಭವನದಲ್ಲಿ ನಡೆಯಲಿರುವ ಸಭೆಗೆ ಆಗಮಿಸುವಂತೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಆದರೆ ಕಾವೇರಿ ಕಣಿವೆಯ ಇತರ ರಾಜ್ಯಗಳಾದ ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸದಿರಲು ನಿರ್ಧರಿಸಲಾಗಿದೆ.
ಇನ್ನು ನಾಳೆ ನಡೆಯಲಿರುವ ಸಭೆಗೆ ಕರ್ನಾಟಕದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಸೇರಿದಂತೆ ನೀರಾವರಿ ಇಲಾಖೆಯ ಮುಖ್ಯಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ. ಅಂತೆಯೇ ತಮಿಳುನಾಡು ಪರವಾಗಿ ಲೋಕೋಪಯೋಗಿ ಸಚಿವ ಎಡಪ್ಪಾಡಿ ಎಸ್ ಪಳನಿಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಸಿಎಂ ಜಯಲಲಿತಾ ಅವರ ಅನಾರೋಗ್ಯದಿಂದಾಗಿ ಅವರು ನಾಳಿನ ಸಭೆಗೆ ಗೈರಾಗಲಿದ್ದು, ಅವರ ಬದಲಿಗೆ ಪಳನಿ ಸ್ವಾಮಿ ನೇತೃತ್ವದಲ್ಲಿ ಮೂವರ ತಂಡ ನಾಳಿನ ಸಭೆಯಲ್ಲಿ ತಮಿಳುನಾಡು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 5ರಂದು ಆರಂಭವಾದ ಕಾವೇರಿ ಬಿಕ್ಕಟ್ಟು ಸತತ 22 ದಿನಗಳಿಂದ ಮುಂದುವರಿದೇ ಇದೆ. ಸೆ. 5ರಂದು10 ದಿನಗಳ ಕಾಲ ನಿತ್ಯ 15,000, ಸೆ. 12 ರಂದು ಎಂಟು ದಿನಗಳ ಕಾಲ 12,000 ಕ್ಯುಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿತ್ತು. ಇದರಿಂದ ರಾಜ್ಯದಲ್ಲಿ ಪ್ರತಿಭಟನೆ, ಹಿಂಸಾಕೃತ್ಯಗಳಿಗೆ ಕಾವು ದೊರೆತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


