ರಾಜ್ಯ

ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಜಾಮೀನು

ಮರಳು ಅಕ್ರಮ ಸಾಗಾಣೆಗೆ ಲಂಚ ಪಡೆಯುವಂತೆ ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದರಿಂದ ...

ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಜಾಮೀನು
ಸುನೀಲ್ ಬೋಸ್
Published On :

ಮೈಸೂರು: ಮರಳು ಅಕ್ರಮ  ಸಾಗಾಣೆಗೆ ಲಂಚ ಪಡೆಯುವಂತೆ ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದರಿಂದ ಲೋಕೋಪಯೋಗಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಅವರ ಪುತ್ರ ಸುನೀಲ್‌ ಬೋಸ್‌ ಬುಧವಾರ ನ್ಯಾಯಾಲಯಕ್ಕೆ ಶರಣಾದರು.

ವಿಶಷ ನ್ಯಾಯಾಲಯದ ನ್ಯಾಯಾಧೀಶ ಸುಧೀಂದ್ರನಾಥ್ ಎದುರು ಸುನೀಲ್ ಬೋಸ್ ಮಧ್ಯಹ್ನ 12 ಗಂಟೆಗೆ ಶರಣಾದರು. ನಂತರ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ವಿಚಾರಣೆಗೆ ಸುನೀಲ್‌ ಬೋಸ್‌ ಸತತ 4 ಸಲ ಗೈರಾಗಿದ್ದರು. ಹೀಗಾಗಿ ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಂಗಳವಾರ ಜಾಮೀನು ರಹಿತ ವಾರೆಂಟ್‌ ಜಾರಿಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.