ಸಿಐಡಿ 'ಬಿ' ರಿಪೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಲ್ಲ: ಗಣಪತಿ ಪುತ್ರ ನೇಹಾಲ್
ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್ ಅನ್ನು ಗಣಪತಿ ಅವರ ಪುತ್ರ ,,,

ಮಡಿಕೇರಿ: ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್ ಅನ್ನು ಗಣಪತಿ ಅವರ ಪುತ್ರ ನೇಹಾಲ್ ಒಪ್ಪಿಕೊಂಡಿದ್ದಾರೆ. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿಲ್ಲ ಎಂದು ಮಾಧ್ಯಮ ವರದಿ ಮಾಡಿದೆ.
ವಿದ್ಯಾಭ್ಯಾಸ, ಮನೆಯ ಜವಾಬ್ದಾರಿ ಇರುವುದರಿಂದ ಪದೇ ಪದೇ ಕೋರ್ಟ್ ಗೆ ಹಾಜರಾಗಲು ಸಾಧ್ಯವಾಗುವುದಿಲ್ಲ, ಈ ಹಿನ್ನೆಲೆಯಲ್ಲಿ ತಕರಾರು ಅರ್ಜಿ ಸಲ್ಲಿಸುತ್ತಿಲ್ಲ ಎಂದು ನೇಹಾಲ್ ಹೇಳಿದ್ದಾರೆ ಎನ್ನಲಾಗಿದೆ.
ಗಣಪತಿ ಅವರ ತಂದೆ ಕುಶಾಲಪ್ಪ, ಸೋದರ ಮಾಚಯ್ಯ, ಸೋದರಿಯರು ನ್ಯಾಯಾಲಯಕ್ಕೆ ಆಗಮಿಸಿದ್ದು, ತಮ್ಮನ್ನು ದೂರುದಾರರಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯಲ್ಲಿ ನಮ್ಮನ್ನು ಸಂಪರ್ಕಿಸದೆ ಕೈ ಬಿಟ್ಟಿದ್ದಾರೆ, ಕಾರಣ ಏನೆಂದು ಗೊತ್ತಿಲ್ಲ ಎಂಬುದಾಗಿ ಗಣಪತಿ ಅವರ ಕುಟುಂಬ ಸದಸ್ಯರು ಹೇಳಿದ್ದಾರೆ. ಇವರು ಸಲ್ಲಿಸಿರುವ ಮನವಿಯ ವಿಚಾರಣೆ ಅ.24ಕ್ಕೆ ನಿಗದಿಯಾಗಿದೆ.
ಪ್ರಕರಣದ ಆರೋಪಿಯಾಗಿದ್ದ ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಐಡಿಯಿಂದ ಕ್ಲೀನ್‌ಚಿಟ್ ಪಡೆದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


