ರಾಜ್ಯ

ಕೊಲೆ ಪ್ರಯತ್ನ ಸಾಬೀತು ಪಡಿಸಲು ಪೊಲೀಸರು ವಿಫಲ: ಕಾವೇರಿ ಹೋರಾಟಗಾರರಿಗೆ ಜಾಮೀನು

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಹಲವು ಹೋರಾಟಗಾರರನ್ನು ಬಂಧಿಸಿ ಪೊಲೀಸರು ಕೊಲೆಯತ್ನದ ಕೇಸು ..

ಕೊಲೆ ಪ್ರಯತ್ನ ಸಾಬೀತು ಪಡಿಸಲು ಪೊಲೀಸರು ವಿಫಲ: ಕಾವೇರಿ ಹೋರಾಟಗಾರರಿಗೆ ಜಾಮೀನು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಹಲವು ಹೋರಾಟಗಾರರನ್ನು ಬಂಧಿಸಿ ಪೊಲೀಸರು ಕೊಲೆಯತ್ನದ ಕೇಸು ದಾಖಲಿಸಿದ್ದರು. ಆದರೆ ಆರೋಪಕ್ಕೆ ಸರಿಯಾದ ಸಾಕ್ಷಿಗಳನ್ನು ಒದಗಿಸಲು ಪೊಲೀಸರು ವಿಫಲವಾದ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿದೆ.

ಪೊಲೀಸರು ಮಾಡಿದ್ದ ಆರೋಪ ಬೆಂಬಲಿಸಲು ಸಮರ್ಥ ಸಾಕ್ಷ್ಯಾಧಾರಗಳನ್ನು ಪೊಲೀಸರು ಒದಗಿಸಿಲ್ಲ, ಹೀಗಾಗಿ ಸೆಪ್ಟಂಬರ್ 13 ರಿಂದ ನ್ಯಾಯಾಂಗ ವಶದಲ್ಲಿದ್ದ ಹೋರಾಟಗಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಜಾಮೀನು ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಬಿ ಕಟ್ಟಿ, ಪ್ರತಿಭಟನಾಕಾರರು ಯಾರನ್ನು ಕೊಲೆ  ಮಾಡುವ ಉದ್ದೇಶದಿಂದ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ,.ಜೊತೆಗೆ ಪೊಲೀಸರು ಗಾಯಗೊಂಡಿರುವ ಸಂತ್ರಸ್ತರ ಬಗ್ಗೆ ಯಾವುದೇ ಪ್ರಮಾಣ ಪತ್ರಗಳನ್ನು ಒದಗಿಸಲಿಲ್ಲ, ಹೀಗಾಗಿ ಆರೋಪಿಗಳು ಕೊಲೆ ಪ್ರಯತ್ನದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿ ಜಾಮೀನು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.