ರಾಜ್ಯ

ನೀರಿಲ್ಲದೆ ಬೆಳೆಹಾನಿ: ಸಾಲ ತೀರಿಸಲಾಗದೇ ಮಂಡ್ಯದಲ್ಲಿ ಇಬ್ಬರು ರೈತರ ಆತ್ಮಹತ್ಯೆ

ಪ್ರತ್ಯೇಕ ಪ್ರಕರಣಗಳಲ್ಲಿ ಸಾಲಬಾಧೆಯಿಂದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ....

ನೀರಿಲ್ಲದೆ ಬೆಳೆಹಾನಿ: ಸಾಲ ತೀರಿಸಲಾಗದೇ ಮಂಡ್ಯದಲ್ಲಿ ಇಬ್ಬರು ರೈತರ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಮಂಡ್ಯ: ಪ್ರತ್ಯೇಕ ಪ್ರಕರಣಗಳಲ್ಲಿ ಸಾಲಬಾಧೆಯಿಂದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಗೀಗುಂಡಿ ಗ್ರಾಮದ ಸೋಮಶೇಖರ್ ಮತ್ತು ಗಾಜನೂರಿನ ಶಿನರಾಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮಶೇಖರ್ ಕಬ್ಬಿನ ಬೆಳೆ ಬೆಳೆದಿದ್ದರು. ಇವರಿಗೆ 4 ಲಕ್ಷ ರು. ಸಾಲವಿತ್ತು. ಮಾಡಿದ ಸಾಲವನ್ನು ತೀರಿಸಲು ಬೇರೆ ಮಾರ್ಗವಿಲ್ಲದೇ ತಮ್ಮ ಜಮೀನಿನಲ್ಲಿ ನೇಣು ಹಾಕಿಕೊಂಡಿದ್ದಾರೆ. ನೀರಿಲ್ಲದೆ ಕಬ್ಬಿನ ಬೆಳೆ ಒಣಗಿ ಹಾಳಾಗಿತ್ತು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ನತನ ರೈತರ ಕುಟುಂಬಸ್ಥರು ತಿಳಿಸಿದ್ದಾರೆ.

ಮತ್ತೊಬ್ಬ ಗಾಜನೂರಿನ ರೈತ ತಮ್ಮ ಎರಡು ಎಕರೆ ಜಮೀನಿನಲ್ಲಿ ರಾಗಿ ಮತ್ತು ಜೋಳ ಬೆಳೆದಿದ್ದರು. 10 ಲಕ್ಷ ಸಾಲ ಮಾಡಿದ್ದ ಶಿವರಾಮೇಗೌಡರ ಕೊಳವೆ ಬಾವಿಗಳು ಬತ್ತಿ ಹೋಗಿದ್ದವು. ಸಾಲವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಆತ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.