'ಯೋಗಿ' ಎಫೆಕ್ಟ್: ನಗರದ ಅಕ್ರಮ ಮಾಂಸದಂಗಡಿಗಳ ಮೇಲೆ ಬಿಬಿಎಂಪಿ ದಾಳಿ?
ಅಕ್ರಮ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳ ಮೇಲೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಠಿಣ ಕ್ರಮಕೈಗೊಂಡಿರುವ ಪರಿಣಾಮ ರಾಜ್ಯದ ಮೇಲೂ ಬಿದ್ದಿದ್ದು, ಉದ್ಯಾನ ನಗರಿ ಬೆಂಗಳೂರಿನಲ್ಲೂ ಅಕ್ರಮ ಮಾಂಸದಂಗಡಿಗಳ...

Published On :
ಬೆಂಗಳೂರು: ಅಕ್ರಮ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳ ಮೇಲೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಠಿಣ ಕ್ರಮಕೈಗೊಂಡಿರುವ ಪರಿಣಾಮ ರಾಜ್ಯದ ಮೇಲೂ ಬಿದ್ದಿದ್ದು, ಉದ್ಯಾನ ನಗರಿ ಬೆಂಗಳೂರಿನಲ್ಲೂ ಅಕ್ರಮ ಮಾಂಸದಂಗಡಿಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಲು ನಿರ್ಧಾರ ಕೈಗೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು (ಬಿಬಿಎಂಪಿ) ನಗರದಲ್ಲಿರುವ ಅಕ್ರಮ ಮಾಂಸದ ಅಂಗಡಿಗಳ ಮೇಲೆ ದಾಳಿ ಮಾಡುವ ಸಲುವಾಗಿ ಈಗಾಗಲೇ ತಂಡಗಳನ್ನು ರಚನೆ ಮಾಡಿದ್ದು, ತಂಡದಲ್ಲಿರುವ ಅಧಿಕಾರಿಗಳು ಶೀಘ್ರದಲ್ಲಿಯೇ ಅಕ್ರಮ ಮಾಂಸದ ಅಂಗಡಿಗಳ ಮೇಲೆ ದಾಳಿ ಮಾಡಲಿದ್ದಾರೆಂದು 'ಟೈಮ್ಸ್ ಆಫ್ ಇಂಡಿಯಾ' ವರದಿಗಳು ತಿಳಿಸಿವೆ.
ನಗರದಲ್ಲಿ 3,600ಕ್ಕೂ ಹೆಚ್ಚು ಮಾಂಸದ ಅಂಗಡಿಗಳಿವೆ. ಅಕ್ರಮ ಮಾಂಸದ ಅಂಗಡಿಗಳ ಮೇಲೆ ದಾಳಿ ಮಾಡುವ ಸಲುವಾಗಿ ಈಗಾಗಲೇ ಎರಡು ತಂಡಗಳನ್ನು ರಚನೆ ಮಾಡಲಾಗಿದ್ದು, ಎರಡು ತಂಡಗಳು ದಿಢೀರನೇ ಮಾಂಸದ ಅಂಗಡಿಗಳ ಮೇಲೆ ದಾಳಿ ಮಾಡಲಿವೆ. ದಾಖಲೆಗಳನ್ನು ಪಿರಿಶೀಲನೆ ಮಾಡಿದ ಬಳಿಕ ಅಕ್ರಮ ಎಂದು ತಿಳಿದುಬಂದರೆ ಅಂತಹ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತದೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕ ಡಾ.ಶ್ರೀರಾಮ್ ಅವರು ಹೇಳಿದ್ದಾರೆ.
ಬಿಬಿಎಂಪಿ ಅಧಿಕಾರಿಗಳು ಮಟನ್, ಮೀನು, ಚಿಕನ್, ಗೋಮಾಂಸ, ಹಂದಿ ಮಾಂಸ ಹಾಗೂ ಮೊಟ್ಟೆ ಅಂಗಡಿಗಳಿಗೆ ಪ್ರತ್ಯೇಕ ಪರವಾನಗಿಗಳನ್ನು ನೀಡಿರುತ್ತದೆ. ಪರವಾನಗಿಯನ್ನು ಎರಡು ರೀತಿಯಲ್ಲಿ ನೀಡಲಾಗಿರುತ್ತದೆ. ತಾಜಾ ಮಾಂಸ ಮಾರಾಟ ಅಂಗಡಿಗಳಿಗೆ ( ರೂ.2 ಸಾವಿರ ಪರವಾನಗಿ) ಹಾಗೂ ಶೇಖರಿಸಿಟ್ಟ ಮಾಂಸ ( ತಂಪು ಸಂಗ್ರಹಣೆಯ ಸೌಲಭ್ಯ)ದ ಅಂಗಡಿಗಳಿಗೆ (ರೂ.10,000 ಪರವಾನಗಿ) ಪ್ರತ್ಯೇಕವಾಗಿ ಪರವಾನಗಿಗಳನ್ನು ನೀಡಿರುತ್ತದೆ. ಪರವಾನಗಿಗೆ ಅರ್ಜಿ ಸಲ್ಲಿಕೆ ಮಾಡಿದವರು ಅಂಗಡಿ ಸ್ಥಾಪನೆ ಮಾಡುವುದಕ್ಕೂ ಮುನ್ನ ಆಯಾ ಕಟ್ಟಡಗಳು ಮತ್ತು ನೆರೆಮನೆಯವರ ಒಪ್ಪಿಗೆಯನ್ನು ಪಡೆದುಕೊಂಡಿರಬೇಕಾಗಿರುತ್ತದೆ.
ಹೊರ ವರ್ತುಲ ರಸ್ತೆಯಲ್ಲಿ ಮಾಂಸದ ಅಂಗಡಿಯನ್ನು ನಡೆಸಬೇಕಾದರೆ, ರಸ್ತೆಯು 40 ಅಡಿಯಷ್ಟು ವಿಸ್ತೀರ್ಣವನ್ನು ಹೊಂದಿರಬೇಕಾಗಿರುತ್ತದೆ. ಹೊರ ವರ್ತುಲ ರಸ್ತೆಯಿಂದ ಹೊರಗೆ ನಡೆಸುವ ಅಂಗಡಿಗಳ ರಸ್ತೆಗಳ ವಿಸ್ತೀರ್ಣ 60 ಅಡಿಯಷ್ಟಿರಬೇಕು. ದಾಳಿ ವೇಳೆ ಅಧಿಕಾರಿಗಳು ಅಂಗಡಿಗಳ ಸ್ವಚ್ಛತೆ ಹಾಗೂ ನೈರ್ಮಲ್ಯವನ್ನು ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೆ, ಅಂಗಡಿಯ ಪರವಾನಗಿಯನ್ನು ಪರಿಶೀಲನೆ ನಡೆಸಲಿದ್ದಾರೆ. ಈ ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಿದ ಅಂಗಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ಬಂದ್ ಮಾಡಿಸಲಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


