ಚಿತ್ರದುರ್ಗ: ಕೊನೆಗೂ ಬೋನಿಗೆ ಬಿತ್ತು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಚಿರತೆ
ಹಾಲಿಗೊಂಡನಹಳ್ಳಿ ಸಮೀಪದ ಕರೆಕಲ್ಲುಗುಡ್ಡ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆಯೊಂದು ಶನಿವಾರ ಸೆರೆಯಾಗಿದೆ....

Published On :
ಚಿತ್ರದುರ್ಗ: ಹಾಲಿಗೊಂಡನಹಳ್ಳಿ ಸಮೀಪದ ಕರೆಕಲ್ಲುಗುಡ್ಡ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆಯೊಂದು ಶನಿವಾರ ಸೆರೆಯಾಗಿದೆ.
ಈ ಭಾಗದಲ್ಲಿ ಹಲವು ದಿನಗಳಿಂದ ಸಂಜೆಯ ಹೊತ್ತಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಈ ಬಗ್ಗೆ ಮಾರ್ಚ್ 25ರಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರು.
ಬೋನಿನೊಳಗೆ ಕಟ್ಟಿಹಾಕಿದ್ದ ನಾಯಿಯ ಬೇಟೆಗೆ ಬಂದ ಚಿರತೆ ಕೊನೆಗೂ ಸೆರೆಯಾಗಿದೆ. ಅದನ್ನು ಸದ್ಯ ಪರಶುರಾಂಪುರ ವಲಯ ಅರಣ್ಯ ಕಚೇರಿಯಲ್ಲಿ ಇಡಲಾಗಿದ್ದು, ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಚಿರತೆ ಸೆರೆಗಾಗಿ ನಿತ್ಯವೂ ಹಗಲು, ರಾತ್ರಿಯ ಪಾಳಿ ಪದ್ಧತಿಯಲ್ಲಿ 5–6 ಮಂದಿ ಅರಣ್ಯ ರಕ್ಷಕರನ್ನು ನೇಮಿಸಲಾಗಿತ್ತು.
ಶನಿವಾರ ಮುಂಜಾನೆ ನಾಲ್ಕರ ಸಮಯದಲ್ಲಿ ಚಿರತೆ ಸೆರೆಯಾಗಿದ್ದು, ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸುರೇಶ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


