ರಾಜ್ಯ

ರೈತನ ಕುಟುಂಬಕ್ಕೆ ರೂ.1 ಲಕ್ಷ ನೀಡಿ ಸಂಕಷ್ಟಕ್ಕೆ ಸಿಲುಕಿದ ಬಿ.ಎಸ್. ಯಡಿಯೂರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೊಸ ಸಂಕಷ್ಟವೊಂದು ಎದುರಾಗಿದ್ದು, ಗುಂಡ್ಲುಪೇಟೆ ಉಪಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪಗಳು ಕೇಳಿ ಬಂದಿವೆ...

ರೈತನ ಕುಟುಂಬಕ್ಕೆ ರೂ.1 ಲಕ್ಷ ನೀಡಿ ಸಂಕಷ್ಟಕ್ಕೆ ಸಿಲುಕಿದ ಬಿ.ಎಸ್. ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
Published On :
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೊಸ ಸಂಕಷ್ಟವೊಂದು ಎದುರಾಗಿದ್ದು, ಗುಂಡ್ಲುಪೇಟೆ ಉಪಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪಗಳು ಕೇಳಿ ಬಂದಿವೆ. 
ಹೊಸಹಳ್ಳಿ ಗ್ರಾಮದಲ್ಲಿ ಕೆಲ ದಿನಗಳ ಹಿಂದಷ್ಟೇ ಸಾಲಭಾಧೆಯಿಂದ ಚಿಕ್ಕಶೆಟ್ಟಿ ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದ. ಗುಂಡ್ಲುಪೇಟೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಯಡಿಯೂರಪ್ಪ ಅವರು ಚಿಕ್ಕಶೆಟ್ಟಿಯವರ ಪತ್ನಿ ಸಾವಿತ್ರಿಯವರಿಗೆ ರೂ.1 ಲಕ್ಷ ಹಣವನ್ನು ನೀಡಿದ್ದಾರೆ. ಇದರ ವಿಡಿಯೋವೊಂದು ಇದೀಗ ಬಹಿರಂಗಗೊಂಡಿದ್ದು, ವಿಡಿಯೋ ಸಾಕಷ್ಟು ವೈರಲ್ ಆಗಿದೆ. 
ವಿಡಿಯೋದಲ್ಲಿರುವ ಪ್ರಕಾರ, ಹಣ ನೀಡುವ ವೇಳೆ ಯಡಿಯೂರಪ್ಪ ಅವರು ಸ್ಥಳದಲ್ಲಿದ್ದ ಮಾಧ್ಯಮ ವರದಿಗಾರನೊಬ್ಬನ ಕ್ಯಾಮೆರಾವನ್ನು ಆಫ್ ಮಾಡುವಂತೆ ತಿಳಿಸಿದ್ದಾರೆ. ಸ್ಥಳದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಕೂಡ ಇರುವುದು ಕಂಡು ಬಂದಿದೆ. 
ಕಾಂಗ್ರೆಸ್ ನಾಯಕ ಮತ್ತು ಮೈಸೂರು ಪೈಯಿಂಟ್ಸ್ ಮತ್ತು ವರ್ನಿಷ್ ಲಿಮಿಟೆಡ್ ಮುಖ್ಯಸ್ಥ ಹೆಚ್.ಎ ವೆಂಕಟೇಶ್ ಅವರು ಯಡಿಯೂರಪ್ಪ ಅವರ ವಿರುದ್ಧ ಚುನಾವಣಾ ಆಯೋಗದ ಬಳಿ ದೂರು ದಾಖಲಿಸಿದ್ದಾರೆ. 
ದೂರಿನಲ್ಲಿ ಯಡಿಯೂರಪ್ಪ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ. ರೈತರ ಮತಗಳನ್ನು ಪಡೆಯುವ ಸುಲುವಾಗಿ ಯಡಿಯೂರಪ್ಪ ಅವರು ನಾಟಕವನ್ನು ಮಾಡಿದ್ದಾರೆ. ಇದು ನಿಜಕ್ಕೂ ಗಂಭೀರವಾಗ ಅಪರಾಧ. ಜನರನ್ನು ಪ್ರತಿನಿಧಿಸುವ ವ್ಯಕ್ತಿಯಾಗಿ, ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಒಬ್ಬ ವ್ಯಕ್ತಿಗೆ ಕಾನೂನು ಮತ್ತು ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಅರಿವಿರಬೇಕು. ಯಡಿಯೂರಪ್ಪ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಅವರ ವಿರುದ್ಧ ಆಯೋಗ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಲೋಕಸಭಾ ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.