ರಾಜ್ಯ

ಬೆಂಗಳೂರಿಗೆ ಜೂನ್ 15ರವರೆಗೆ ಕಾವೇರಿ ನೀರು ಲಭ್ಯ: ಎಂ.ಬಿ.ಪಾಟೀಲ್

ಬೇಸಿಗೆಯ ಬರಗಾಲದಲ್ಲಿ ಕುಡಿಯುವ ನೀರಿಗೆ ಆತಂಕ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು...

ಬೆಂಗಳೂರಿಗೆ ಜೂನ್ 15ರವರೆಗೆ ಕಾವೇರಿ ನೀರು ಲಭ್ಯ: ಎಂ.ಬಿ.ಪಾಟೀಲ್
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಬೇಸಿಗೆಯ ಬರಗಾಲದಲ್ಲಿ ಕುಡಿಯುವ ನೀರಿಗೆ ತತ್ವಾರದ ಆತಂಕ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ನಾಗರಿಕರು ಭಯಪಡುವ ಅಗತ್ಯವಿಲ್ಲ. ಜೂನ್ 15ರವರೆಗೆ ಕಾವೇರಿ ನೀರು ಪೂರೈಕೆ ಮಾಡಲು ಬೇಕಾಗುವಷ್ಟು ನೀರು ಇದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಕೃಷ್ಣರಾಜ ಸಾಗರದಲ್ಲಿ 4.438 ಟಿಎಂಸಿ, ಕಬಿನಿಯಲ್ಲಿ 0.295 ಟಿಎಂಸಿ ನೀರು ಬೆಂಗಳೂರು ನಗರಕ್ಕೆ ಕುಡಿಯುವ ನೀರಿಗೆ ಪೂರೈಕೆಯಾಗುತ್ತಿದ್ದು, 4.7 ಟಿಎಂಸಿ ನೀರು ಪೂರೈಕೆಯಾಗುತ್ತಿದೆ. ಮುಂದಿನ 60 ದಿನಗಳಲ್ಲಿ ನಗರದ ಜನತೆಯ ಕುಡಿಯುವ ನೀರಿನ ಅಗತ್ಯ ಪೂರೈಸಲು 4.14 ಟಿಎಂಸಿ ನೀರಿನ ಅಗತ್ಯವಿದೆ. ಈಗಿರುವ ನೀರಿನ ಸಂಗ್ರಹದ ಆಧಾರದಲ್ಲಿ ಜೂನ್ 15ರವರೆಗೆ ಬೆಂಗಳೂರಿನ ಜನತೆಗೆ ಕುಡಿಯುವ ನೀರು ಒದಗಿಸಬಹುದು ಎಂದರು.
ಮೇಯಲ್ಲಿ ಸುರಿಯುವ ಪೂರ್ವ ಮುಂಗಾರು ಮಳೆ ಮತ್ತು ಜೂನ್ ನಲ್ಲಿ ಮುಂಗಾರು ಮಳೆ ಬಂದರೆ ನೀರಿನ ಕೊರತೆಯನ್ನು ನೀಗಿಸಬಹುದು ಎಂದು ಹೇಳಿದರು. ಅವರು ನಿನ್ನೆ ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆ ಮತ್ತು ಬೆಂಗಳೂರು ನಗರ ನೀರು ಸರಬರಾಜು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಕಾವೇರಿ, ಕೃಷ್ಣಾ ಮತ್ತು ತುಂಗಭದ್ರಾ ನದಿ ಪಾತ್ರಗಳ ಜನರ ನೀರಿನ ಅಗತ್ಯಗಳನ್ನು ಪೂರೈಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು.
ಪ್ರಸ್ತುತ ಕೆಆರ್ಎಸ್, ಕಬಿನಿ, ಹಾರಂಗಿ,ಹೇಮಾವತಿ, ಆಲಮಟ್ಟಿ, ನಾರಾಯಣಪುರ, ಹಿಡ್ಕಲ್, ಹಿಪ್ಪರಗಿ, ತುಂಗಭದ್ರಾ ಮತ್ತು ಮಲಪ್ರಭಾ ಜಲಾಶಯಗಳಲ್ಲಿನ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಬಳಸಿಕೊಳ್ಳಲಾಗುತ್ತಿದೆ.ರೈತರ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಿಡುಗಡೆ ಮಾಡಲಾಗುವುದಿಲ್ಲ. ರೈತರು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕೆಂದು ಸಚಿವ ಪಾಟೀಲ್ ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಬೆಂಗಳೂರು ನೀರು ಸರಬರಾಜು ಮಂಡಳಿ ನಿತ್ಯ 600 ಕ್ಯೂಸೆಕ್ಸ್ ನೀರನ್ನು ಜಲಾಶಯಗಳಿಂದ ಬಿಡುಗಡೆ ಮಾಡುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.