ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ವೆಂಕಟರಮಣ ಆಯ್ಕೆ
ತೀವ್ರ ಕುತೂಹಲ ಮೂಡಿಸಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೆಂಕಟರಮಣ...

Published On :
ಬಳ್ಳಾರಿ: ತೀವ್ರ ಕುತೂಹಲ ಮೂಡಿಸಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೆಂಕಟರಮಣ ಅವರು ನೂತನ ಮೇಯರ್ ಆಗಿ ಹಾಗೂ ಉಪ ಮೇಯರ್ ಆಗಿ ಉಮಾದೇವಿ ಅವರು ಆಯ್ಕೆಯಾಗಿದ್ದಾರೆ
ಇಂದು ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೆಂಕಟರಮಣ ಅವರು 24 ಮತಗಳನ್ನು ಪಡೆದು ಮೇಯರ್ ಸ್ಥಾನಕ್ಕೆ ಆಯ್ಕೆಯಾದರೆ, ಉಮಾದೇವಿ ಅವರು 20 ಮತಗಳನ್ನು ಪಡೆದು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಈ ತಿಂಗಳ 3 ರಂದು ಮೇಯರ್ ಉಪ ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ ಅಂದು ಬೆಳಗ್ಗೆ ಇದ್ದಕ್ಕಿದ್ದಂತೆ ಚುನಾವಣೆ ನಡೆಸಬೇಕಾದ ಪ್ರಾದೇಶಿಕ ಆಯುಕ್ತ ಬಿಸ್ವಾಸ್ ತಮ್ಮ ಆರೋಗ್ಯ ಸರಿ ಇಲ್ಲವೆಂದು ಚುನಾವಣೆ ಮುಂದೂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೇಯರ್ ಚುನಾವಣೆMayoral electionBallary Mahanagara PalikeCongress winsಬಳ್ಳಾರಿ ಮಹಾನಗರ ಪಾಲಿಕೆಕಾಂಗ್ರೆಸ್ ಗೆಲುವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


