ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ: ಡಿ.ಕೆ. ಶಿವಕುಮಾರ್
ಟ್ರಾನ್ಸ್'ಮಿಶನ್ (ಪ್ರಸರಣ) ಲೈನ್ ಗಳ ಕಾರ್ಯ ಪೂರ್ಣಗೊಳ್ಳದ ಕಾರಣ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್...

Published On :
ಬೆಂಗಳೂರು: ಟ್ರಾನ್ಸ್'ಮಿಶನ್ (ಪ್ರಸರಣ) ಲೈನ್ ಗಳ ಕಾರ್ಯ ಪೂರ್ಣಗೊಳ್ಳದ ಕಾರಣ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ದೊಡ್ಡಬಳ್ಳಾಪುರದಲ್ಲಿ ಮಾತನಾಡಿರುವ ಅವರು, ಯಲಹಂಕ ಮತ್ತು ಕೋಲ್ಸ್ ಪಾರ್ಕ್ ಬಳಿ ನಡೆಯುತ್ತಿರುವ ಟ್ರಾನ್ಸ್'ಮಿಶನ್ (ಪ್ರಸರಣ) ಲೈನ್ ಸಂಪರ್ಕ ಕಾರ್ಯ ಪೂರ್ಣಗೊಂಡಿಲ್ಲ. ಇನ್ನು ಜಿಗಣಿಯಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಇದೇ ಕಾರಣಕ್ಕೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿದೆ ಎಂದು ಹೇಳಿದ್ದಾರೆ.
ವಿದ್ಯುತ್ ಬೆಲೆ ಏರಿಕೆಯಿಂದಾಗಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಿಬ್ಬಂದಿಗಳನ್ನು ಶತ್ರುಗಳಂತೆ ಕಾಣುತ್ತಿರುವ ಹಿನ್ನಲೆಯಲ್ಲಿ ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾದ ಅಧಿಕಾರಿಗಳು ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ಅವರು, ವಿದ್ಯುತ್ ದರ ಏರಿಕೆಯನ್ನು ರಾಜ್ಯ ಸರ್ಕಾರ ಮಾಡಿಲ್ಲ. ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದರು. ಕೈಗಾರಿಕೆಗಳಲ್ಲಿ ಹೆಚ್ಚು ವಿದ್ಯುತ್ ಬಳಕೆಗೆ ರಿಯಾಯಿತ ದರ ನಿಗದಿಮಾಡಿದ್ದಾರೆ. ಕೆಇ.ಆರ್.ಸಿ ಗ್ರಾಹಕರ ಅಭಿಪ್ರಾಯ ಪಡೆದು ದರ ಏರಿಕೆ ಮಾಡಿದ್ದಾರೆ. ಸರ್ಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಾಗೂ ಗ್ರಾಹಕ ಮೂರು ವರ್ಗದ ಹಿತಾಸಕ್ತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಯೋಗವು ನ್ಯಾಯಸಮ್ಮತವಾದ ತೀರ್ಮಾನವನ್ನು ಪ್ರಕಟಿಸಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ವಿದ್ಯುತ್ ಖರೀದಿ ಅಕ್ರಮ ಸಂಬಂಧ ತನಿಖೆ ಸಂಬಂಧ ಸದನ ಸಮತಿ ಸದಸ್ಯರಿಗೆ ಸಂಬಂಧಪಟ್ಟ ದಾಖಲೆಗಳನ್ನು ಇಂಧನ ಇಲಾಖೆಯ ಅಧಿಕಾರಿಗಳು ಒದಗಿಸದೆ ಮುಚ್ಚಿಡುವ ಪ್ರಯತ್ನ ನಡೆಸಿದ್ದಾರೆಂಬ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಆರೋಪವನ್ನು ತಳ್ಳಿಹಾಕಿದ್ದಾರೆ.
ಕುಮಾರಸ್ವಾಮಿ ಅವರಿಗೆ ಎಲ್ಲಾ ದಾಖಲೆಗಳನ್ನು ಒದಗಿಸಲಾಗಿದೆ. ಬಹುಶಃ ದಾಖಲೆಗಳನ್ನು ನೋಡಲು ಅವರಿಗೆ ಸಮಯ ಸಿಕ್ಕಿಲ್ಲವಿರಬಹುದು ಎಂದು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಭರವಸೆ ನೀಡಿದ್ದಂತೆಯೇ ಏಪ್ರಿಲ್ 15ರ ಒಳಗಾಗಿ ವರದಿ ಸಲ್ಲಿಸಲು ಬದ್ಧವಾಗಿದ್ದೇವೆ. ಆದರೆ, ಸಮಿತಿಯಲ್ಲಿನ ಬಿಜೆಪಿಯ ಸದಸ್ಯರು ಸೇರಿದಂತೆ ಉಳಿದ ಸದಸ್ಯರು ಮಾಹಿತಿ ಪಡೆಯಲು ಮತ್ತಷ್ಟು ಕಾಲವಕಾಶಬೇಕೆಂದು ಕೇಳಿದ್ದಾರೆ. ಈಗಾಗಲೇ ಶೇ.90 ರಷ್ಟು ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಲಿಖಿತವಾಗಿ ಅಭಿಪ್ರಾಯ ನೀಡಲು ಅವಕಾಶ ಬೇಕೆಂಬ ಸಮಿತಿ ಸದಸ್ಯರ ಮನವಿಗೆ ಸ್ಪೀಕರ್ ಒಪ್ಪಿದರೆ, 1-2 ವಾರ ವರದಿ ಸಲ್ಲಿಕೆ ಮುಂದೆ ಹೋಗಬಹುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


