ಚುನಾವಣೆಗೆ ನಿಲ್ಲಲ್ಲ; ಸಕ್ರಿಯ ರಾಜಕಾರಣ ಬಿಡಲ್ಲ: ಶ್ರೀನಿವಾಸ ಪ್ರಸಾದ್
ಇನ್ನೆಂದೂ ತಾವು ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ನಂಜನಗೂಡು: ಇನ್ನೆಂದೂ ತಾವು ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ನಂಜನಗೂಡು ಉಪ ಚುನಾವಣೆಯಲ್ಲಿನ ಸೋಲಿನ ಬಳಿಕ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಚುನಾವಣಾ ರಾಜಕೀಯ ತಾವು ನಿವೃತ್ತರಾಗುತ್ತಿದ್ದೇನೆ. ಆದರೆ ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ ಎಂದು ಹೇಳಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದ ಹಿನ್ನಲೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೆ. ಉಪ ಚುನಾವಣೆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸ್ವಾಭಿಮಾನದ ಬಿಸಿ ಮುಟ್ಟಿಸಿದ್ದೇನೆ ಎಂಬ ಸಂತೋಷ ತಮಗಿದೆ. ಜನ ನನ್ನ ಸ್ವಾಭಿಮಾನವನ್ನು ಮೆಚ್ಚಿದ್ದಾರೆ. ಹೀಗಾಗಿ ನನಗೆ ಮತ ನೀಡಿ ಮತದಾರರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದರು.
ಸರ್ಕಾರದ ವಿರುದ್ಧ ಶ್ರೀನಿವಾಸ ಪ್ರಸಾದ್ ಮತ್ತೆ ವಾಗ್ದಾಳಿ
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಶ್ರೀನಿವಾಸ ಪ್ರಸಾದ್ ಅವರು, ಉಪ ಚುನಾವಣೆ ಗೆಲ್ಲುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಮತದಾನಕ್ಕೂ ಕೊನೆಯ ಮೂರು ದಿನಗಳಲ್ಲಿ ಇಡೀ ಸರ್ಕಾರವೇ ನಂಜನಗೂಡಿನಲ್ಲಿ ನೆಲೆಯೂರಿತ್ತು. ಇಡೀ ಪೊಲೀಸ್ ಇಲಾಖೆಯನ್ನು ಸಿದ್ದರಾಮಯ್ಯ ದುರ್ಬಳಕೆ ಮಾಡಿಕೊಳ್ಳುವ ಮೂಲಕ ದುರ್ಬಳಕೆಯಲ್ಲೂ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ. ಹಣದ ಬಲ ಮತ್ತು ಅಧಿಕಾರದ ಬಲದಿಂದಾಗಿ ಕಾಂಗ್ರೆಸ್ ಜಯ ಸಾಧಿಸಿದೆ.
2 ಲಕ್ಷ ಮತದಾರರ ಪೈಕಿ ಬರೊಬ್ಬರಿ 1 ಲಕ್ಷದ 20 ಸಾವಿರ ಜನಕ್ಕೆ ಹಣ ಹಂಚಿಕೆ ಮಾಡಿದ್ದಾರೆ. ಕೆಂಪಯ್ಯರಿಂದ ಪೊಲೀಸ್ ಇಲಾಖೆ ದುರುಪಯೋಗ ಪಡಿಸಿಕೊಂಡಿದ್ದು, ನೋಟು ಹಂಚಿಕೆ ಮಾಡುವಾಗ ಸಂಸದರೊಬ್ಬರ ಪಿಎ ಸಿಕ್ಕಿಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ. ಸಿಎಂ ಸಿದ್ದರಾಮಯ್ಯ ಮತದಾನದ ಪಾವಿತ್ರ್ಯತೆ ಹಾಳು ಮಾಡಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


