ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ್ ರಾವ್ ಗೆ ಜಾಮೀನು
ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್‌ಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಮುಂಜೂರು ..

Published On :
ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್‌ಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಮುಂಜೂರು ಮಾಡಿದೆ.
ಈಗಾಗಲೇ ಪ್ರಕರಣ ಸಂಬಂಧ 4 ವರ್ಷ ಜೈಲು ಶಿಕ್ಷೆ ಪೂರೈಸಿರುವ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಒಂದು ಲಕ್ಷರೂ ರೂ. ಮೊತ್ತದ ಶ್ಯೂರಿಟಿ ಬಾಂಡ್, ತನಿಖೆಗೆ ಸಹಕರಿಸಬೇಕು, ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಇತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.
ಅಕ್ಟೊಬರ್ 10 2012 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು, ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು, ಆದರೆ ಸ್ಥಳೀಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣವನ್ನು ಸಿಬಿಐ ಗೆ ವರ್ಗಾಯಿಸಲಾಯಿತು. ಕುಂದಾಪುರ ಮೂಲದ ಗುತ್ತಿಗೆ ಕಾರ್ಮಿಕ ಸಂತೋಷ್ ರಾವ್ ನನ್ನು ಪೊಲೀಸರು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಿಬಿಐCentral Bureau of InvestigationಜಾಮೀನುbailSantosh RaoSowjanya rape and murder caseಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಸಂತೋಷ ರಾವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


