ರಾಜ್ಯ

ಪ್ರೀತಿಸಿದ ಹುಡುಗಿಯರಿಗಾಗಿ ದ್ವಿಚಕ್ರ ವಾಹನ ಕದಿಯುತ್ತಿದ್ದ ಖದೀಮರ ಬಂಧನ

ತಾವು ಪ್ರೀತಿಸಿದ ಹುಡುಗಿಯರಿಗೆ ಗಿಫ್ಟ್ ನೀಡಲು ಬೈಕ್‍ಗಳನ್ನ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ....

ಪ್ರೀತಿಸಿದ ಹುಡುಗಿಯರಿಗಾಗಿ ದ್ವಿಚಕ್ರ ವಾಹನ ಕದಿಯುತ್ತಿದ್ದ ಖದೀಮರ ಬಂಧನ
ಸಾಂದರ್ಭಿಕ ಚಿತ್ರ
Published On :
ಕಲಬುರಗಿ: ತಾವು ಪ್ರೀತಿಸಿದ ಹುಡುಗಿಯರಿಗೆ ಗಿಫ್ಟ್ ನೀಡಲು ಬೈಕ್‍ಗಳನ್ನ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯ ರಾಕೇಶ ಹಾಗೂ ಸೋಮನಾಥ ಮತ್ತು ಬಂಧಿತ ಆರೋಪಿಗಳು. ಬಂಧಿತರಿಂದ ಪೊಲೀಸರು ನಾಲ್ಕು ಡಿಯೋ ಬೈಕ್ ವಶಪಡಿಸಿಕೊಂಡಿದ್ದಾರೆ. ಇವರಿಗೆ ನೆರವು ನೀಡುತ್ತಿದ್ದ ಓಂಕಾರ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ.
ಈ ಖದೀಮರು ಕೇವಲ ಡಿಯೋ ಬೈಕ್ ಮಾತ್ರ ಕಳ್ಳತನ ಮಾಡುತ್ತಿದ್ದರು. ಕಳ್ಳತನ ಮಾಡಿದ ವಾಹನವನ್ನ ಅವರ ಗಲ್9 ಫ್ರೆಂಡ್ಸ್ ಗೆ ನೀಡುತ್ತಿದ್ದರು. ಆದ್ರೆ ಬೈಕ್ ಕದಿಯುತ್ತಿರೋ ವಿಚಾರವನ್ನು ಮಾತ್ರ ತಮ್ಮ ಗರ್ಲ್ ಫ್ರೆಂಡ್ಸ್ ಬಳಿ ಖದೀಮರು ಮುಚ್ಚಿಟ್ಟಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
 ಈ ಖದೀಮರು ಕದ್ದ ಬೈಕಿನಲ್ಲಿದ್ದ ಎಟಿಎಂ ಕಾರ್ಡ್‍ವೊಂದರಿಂದ ಹಣ ಡ್ರಾ ಮಾಡಿದ್ದರು. ಬೈಕ್ ಕಳ್ಳರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಜಾಡು ಹಿಡಿದು ಹೋದ ಪೊಲೀಸರು ಇಬ್ಬರು ಬೈಕ್ ಕಳ್ಳರನ್ನ ಬಂಧಿಸಿದ್ದಾರೆ. ಪೊಲೀಸರ ತನಿಖೆ ವೇಳೆ ಆರೋಪಿಗಳು ಬೈಕ್ ಕಳ್ಳತನದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.